ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೆಮ್ಮಾರಿಯ ಮಹಾಸ್ಫೋಟ ಮುಂದುವರೆದಿದ್ದು, ಇಂದು ಕೊರೊನಾ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿದೆ.
ಇಂದು ರಾಜ್ಯದಲ್ಲಿ ಹೊಸದಾಗಿ 5324 ಮಂದಿಗೆ ಕೊರೊನಾ ವಕ್ಕರಿಸಿದ್ದು, ಒಟ್ಟು ಸೋಂಕಿತರ ಸಂಖ್ಯೆ 1 ಲಕ್ಷದ 1465ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 26 ಮಂದಿ ಕೊರೊನಾದಿಂದ ಮೃತಪಟ್ಟಿದ್ದು, ಒಟ್ಟಾರೆ ರಾಜ್ಯದಲ್ಲಿ ಕೋವಿಡ್‍ಗೆ 75 ಮಂದಿ ಬಲಿ ಪಡೆದಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 1953ಕ್ಕೆ ಏರಿಕೆಯಾಗಿದೆ.
ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಇಂದು 1847 ಮಂದಿ ಡಿಶ್ಚಾರ್ಜ್ ಆಗಿದ್ದು, ಇಲ್ಲಿಯವರೆಗೆ 37,685 ಮಂದಿ ಚಿಕಿತ್ಸೆ ಪಡೆದು ಮನೆಗಳಿಗೆ ಮರಳಿದ್ದಾರೆ.
ಬೆಂಗಳೂರು ನಗರದಲ್ಲಿ ಇಂದು 1470 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, 26 ಜನರು ಉಸಿರು ನಿಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 46,923ಕ್ಕೆ ಏರಿಕೆಯಾಗಿದ್ದು, ಈವರೆಗೆ ಕೊರೊನಾದಿಂದ 917 ಮಂದಿ ಮೃತಪಟ್ಟಿದ್ದಾರೆ.
ಬಳ್ಳಾರಿಯಲ್ಲಿ ಇಂದು ದಾಖಲಾದ ಕೊರೊನಾ ಪ್ರಕರಣಗಳ ಸಂಖ್ಯೆ ಗಾಬರಿ ಹುಟ್ಟಿಸುತ್ತಿದೆ. ಇದೇ ಮೊದಲ ಬಾರಿಗೆ ಬಳ್ಳಾರಿ ಜಿಲ್ಲೆಯಲ್ಲಿ 840 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಮೂವರ ಪ್ರಾಣಪಕ್ಷಿ ಹಾರಿ ಹೋಗಿದೆ. ಬಳ್ಳಾರಿ ನಂತರ ಕಲಬುರಗಿಯಲ್ಲಿ 631 ಹಾಗೂ ಮೈಸೂರಿನಲ್ಲಿ ಅತ್ಯಧಿಕ ಅಂದರೆ 286 ಮಂದಿಗೆ ಕೊರೊನಾ ವಕ್ಕರಿಸಿದೆ.
ರಾಜ್ಯದಲ್ಲಿ ಹೆಚ್ಚು ಸೋಂಕಿತರು ದಾಖಲಾದ ಜಿಲ್ಲೆಗಳು..
ಬೆಂಗಳೂರು ನಗರ-1470
ಬಳ್ಳಾರಿ-840
ಕಲಬುರಗಿ-631
ಮೈಸೂರು-296
ಉಡುಪಿ-225
ಧಾರವಾಡ-193
ಬೆಳಗಾವಿ-195
ಕೋಲಾರ-142
ಬೆಂಗಳೂರು ಗ್ರಾಮಾಂತರ-138
ರಾಯಚೂರು-120
ದಕ್ಷಿಣ ಕನ್ನಡ-119
ವಿಜಯಪುರ-110
ದಾವಣಗೆರೆ-110








