ಮಗನಿಗೆ ಕೋವಿಡ್ ಬಂದ ಹಿನ್ನೆಲೆ ಮನೆಯನ್ನು ಸೀಲ್ ಡೌನ್ ಮಾಡಲಾಗಿದ್ದ ಪರಿಣಾಮ ಜನರಿಂದ ತೀವ್ರ ನಿಂದನೆಗೆ ಒಳಗಾದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಚಾಮರಾಜನಗರದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೋಕಿನ ಸೋಮಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ತಂದೆ ತಾಯಿಯನ್ನ ನೋಡಲು ಬಂದಿದ್ದ ಮಗನಿಗೆ ಕೊರೊನಾ ಟೆಸ್ಟ್ ಮಾಡಿಸಿಕೊಂಡು ಬರುವಂತೆ ಗ್ರಾಮಸ್ಥರು ಒತ್ತಾಯಿಸಿದ್ರು. ಈ ವೇಳೆ ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಹಿನ್ನೆಲೆ ಮನೆಯನ್ನು ಜಿಲ್ಲಾಡಳಿತದ ವತಿಯಿಂದ ಸೀಲ್ ಡೌನ್ ಮಾಡಲಾಗಿತ್ತು. ಸಾರ್ವಜನಿಕರು ಕುಟುಂಬಸ್ಥರ ನಿಂದನೆ ಮಾಡಿದ್ದಾರೆ. ಅಷ್ಟೇ ಅಲ್ಲ ಬಹಿರ್ದೆಸೆಗೂ ಹೊರಬಾರದಂತೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ನಿಮ್ಮ ಮಗನಿಂದ ಊರಿಗೆ ಕೆಟ್ಟ ಹೆಸರು ಬಂದಿದೆ ಎಂದು ನಿಂದಿಸುತ್ತಲೇ ಬಂದ ಗ್ರಾಮಸ್ಥರು ಆಹಾರ ಪದಾರ್ಥಗಳ ಖರೀದಿಗೂ ಹೊರ ಬಾರದಂತೆ ಹಿಂಸೆ ನೀಡಿದ್ದಾರೆ. ಹೀಗಾಗಿ ಅವಮಾನ ತಾಳಲಾರದೇ , ಗ್ರಾಮಸ್ಥರ ನಿಂದನೆಗೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನೂ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪುತ್ರ ತಂದೆಯ ಅಂತಿಮ ಸಂಸ್ಕಾರಕ್ಕೆ ತೆರಳಿ ಮತ್ತೆ ಕೋವಿಡ್ ಆಸ್ಪತ್ರೆಗೆ ಮರಳಿದ್ದಾರೆ. ಅಲ್ಲದೇ ಈ ಬಗ್ಗೆ ನೊಂದು ವಿಡಿಯೋ ಮಾಡಿರುವ ಮಗ ಇಂತಹ ಪರಿಸ್ಥಿತಿ ಯಾರಿಗೂ ಬರಬಾರದು ಎಂದು ಭಾವುಕರಾಗಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದ್ದು, ಗ್ರಾಮಸ್ಥರ ನಡೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!
ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...








