ರಾಜ್ಯದಲ್ಲಿ ಕೊರೊನಾ ರೌದ್ರಾವತಾರಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ದಿನೇ ದಿನೇ ಹೆಮ್ಮಾರಿಗೆ ಬಲಿಯಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಾಗುತ್ತಲೇ ಇದೆ. ಇಂದು ಕೂಡ ಕೊರೋನಾ ಮಹಾಮಾರಿಗೆ ಕರ್ನಾಟಕದಲ್ಲಿ 57 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 544ಕ್ಕೇರಿಕೆಯಾಗಿದೆ.
ಇಂದು ಒಂದೇ ದಿನ ಬೆಂಗಳೂರಿನಲ್ಲಿ 1447 ಕ್ಕೂ ಅಧಿಕ ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಒಟ್ಟು ರಾಜ್ಯದಲ್ಲಿ 2313 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 33,418ರ ಗಡಿ ದಾಟಿದೆ. ಇದರ ನಡುವೆ ರಾಜ್ಯದಲ್ಲಿ ಗುಣಮುಖರ ಸಂಖ್ಯೆಯಲ್ಲೂ ಏರಿಕೆಯಾಗಿದ್ದು, ಇಂದು ಒಂದೇ ದಿನ 100ಕ್ಕೂ ಅಧಿಕ ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.







