ದ.ಕ. ಜಿಲ್ಲೆಯಲ್ಲಿ ಫಸ್ಟ್ ನ್ಯೂರೋ ಆಸ್ಪತ್ರೆಯ ಸಂಪರ್ಕದಿಂದ ಸೋಂಕು ತಗುಲಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಫಸ್ಟ್ ನ್ಯೂರೋ ಆಸ್ಪತ್ರೆಯ ಸಂಪರ್ಕದಿಂದ ಶನಿವಾರ ಜಿಲ್ಲೆಯ ಮೂವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದರೆ, ಇಂದು ಮತ್ತೆ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಫಸ್ಟ್ ನ್ಯೂರೋ ಆಸ್ಪತ್ರೆಯ ಸಂಪರ್ಕದಿಂದ ಇವರಿಗೆ ಸೋಂಕು ತಗುಲಿರುವುದು ಖಚಿತವಾಗಿದ್ದು, ಇವರು ಉಡುಪಿ ಜಿಲ್ಲೆಯ ಕಾರ್ಕಳದ ನಿವಾಸಿಗಳು.
ರೋಗಿ ಸಂಖ್ಯೆ 507ರ ಪ್ರಾರ್ಥಮಿಕ ಸಂಪರ್ಕದಲ್ಲಿದ್ದ 50 ವರ್ಷದ ಮಹಿಳೆಯ ಮತ್ತು 26 ವರ್ಷದ ವ್ಯಕ್ತಿಯ ಗಂಟಲ ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, ಪರೀಕ್ಷಾ ವರದಿಯಲ್ಲಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಹಿನ್ನೆಲೆಯಲ್ಲಿ ಇವರನ್ನು ಮಂಗಳೂರಿನಲ್ಲಿಯೇ ಕ್ವಾರಂಟೈನ್ ಮಾಡಲಾಗಿತ್ತು. ಹಾಗಾಗಿ ಇವರು ಉಡುಪಿ ಜಿಲ್ಲೆಯವರಾದರೂ, ದಕ್ಷಿಣ ಕನ್ನಡ ಜಿಲ್ಲೆಯ ಕೊರೊನಾ ಪ್ರಕರಣಕ್ಕೆ ಇವರನ್ನು ಸೇರ್ಪಡೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿದೆ.
ವಾರಾಣಸಿಯಲ್ಲಿ ಭುಗಿಲೆದ್ದ ಧ್ವನಿವರ್ಧಕ ಸಮರ: ಒಂದು ವಾರದಲ್ಲಿ ಮಸೀದಿಗಳ ಲೌಡ್‌ಸ್ಪೀಕರ್ ತೆಗೆಯದಿದ್ದರೆ ಬೃಹತ್ ಆಂದೋಲನ!
ವಾರಾಣಸಿ (ಉತ್ತರ ಪ್ರದೇಶ): ಹನುಮಾನ್ ಚಾಲೀಸಾ ಪಠಣಕ್ಕೆ ವಿರೋಧ ವ್ಯಕ್ತವಾದ ಘಟನೆಯು ಇದೀಗ ಪವಿತ್ರ ನಗರಿ ಕಾಶಿಯಲ್ಲಿ ದೊಡ್ಡ ಧಾರ್ಮಿಕ ಸಂಘರ್ಷಕ್ಕೆ ಕಾರಣವಾಗಿದೆ. ಒಂದು ವಾರದೊಳಗೆ ನಗರದ...