ದ.ಕ. ಜಿಲ್ಲೆಯಲ್ಲಿ ಫಸ್ಟ್ ನ್ಯೂರೋ ಆಸ್ಪತ್ರೆಯ ಸಂಪರ್ಕದಿಂದ ಸೋಂಕು ತಗುಲಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಫಸ್ಟ್ ನ್ಯೂರೋ ಆಸ್ಪತ್ರೆಯ ಸಂಪರ್ಕದಿಂದ ಶನಿವಾರ ಜಿಲ್ಲೆಯ ಮೂವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದರೆ, ಇಂದು ಮತ್ತೆ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಫಸ್ಟ್ ನ್ಯೂರೋ ಆಸ್ಪತ್ರೆಯ ಸಂಪರ್ಕದಿಂದ ಇವರಿಗೆ ಸೋಂಕು ತಗುಲಿರುವುದು ಖಚಿತವಾಗಿದ್ದು, ಇವರು ಉಡುಪಿ ಜಿಲ್ಲೆಯ ಕಾರ್ಕಳದ ನಿವಾಸಿಗಳು.
ರೋಗಿ ಸಂಖ್ಯೆ 507ರ ಪ್ರಾರ್ಥಮಿಕ ಸಂಪರ್ಕದಲ್ಲಿದ್ದ 50 ವರ್ಷದ ಮಹಿಳೆಯ ಮತ್ತು 26 ವರ್ಷದ ವ್ಯಕ್ತಿಯ ಗಂಟಲ ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, ಪರೀಕ್ಷಾ ವರದಿಯಲ್ಲಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಹಿನ್ನೆಲೆಯಲ್ಲಿ ಇವರನ್ನು ಮಂಗಳೂರಿನಲ್ಲಿಯೇ ಕ್ವಾರಂಟೈನ್ ಮಾಡಲಾಗಿತ್ತು. ಹಾಗಾಗಿ ಇವರು ಉಡುಪಿ ಜಿಲ್ಲೆಯವರಾದರೂ, ದಕ್ಷಿಣ ಕನ್ನಡ ಜಿಲ್ಲೆಯ ಕೊರೊನಾ ಪ್ರಕರಣಕ್ಕೆ ಇವರನ್ನು ಸೇರ್ಪಡೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿದೆ.
Film – ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಪ್ರಚಾರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ: ಹಾಲಿವುಡ್ನಲ್ಲಿ ಮಿಂಚಿದ ಕನ್ನಡಿಗ
ಮಂಗಳೂರಿನ ಕೆರಾಡಿಯಿಂದ ಬಂದ ‘ಕಾಂತಾರ’ ಖ್ಯಾತಿಯ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ಜಾಗತಿಕ ಮಟ್ಟದ ಅತಿದೊಡ್ಡ ಸೂಪರ್ ಹೀರೋ ಫ್ರಾಂಚೈಸಿ ‘ಸ್ಪೈಡರ್ ಮ್ಯಾನ್’ ಪ್ರಪಂಚಕ್ಕೆ ಕಾಲಿಡುವ...








