ಬೆಂಗಳೂರು: ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆ(ಬೆಡ್) ಸೇರಿದಂತೆ ಸರ್ಕಾರ ಹಾಗೂ ಬಿಬಿಎಂಪಿಗೆ ಸಮರ್ಪಕವಾಗಿ ಮಾಹಿತಿ ನೀಡದ ರಾಜಧಾನಿ ಬೆಂಗಳೂರಿನ 291 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಎಲ್ಲಾ ಆಸ್ಪತ್ರೆಗಳೂ ನಿಯಮ ಉಲ್ಲಂಘನೆ ಮಾಡಿಲ್ಲ. ಇಲ್ಲಿಯವರೆಗೆ ಕೇವಲ 3 ಆಸ್ಪತ್ರೆಗಳು ಮಾತ್ರ ಸಮರ್ಪಕ ಮಾಹಿತಿ ನೀಡಿವೆ. ಉಳಿದಂತೆ ಮಾಹಿತಿ ನೀಡಿದ 291 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ನೀಡಲಾಗಿದೆ ಎಂದು ಬಿಬಿಎಂಪಿ ನೂತನ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
ನಾನು ಅಧಿಕಾರ ವಹಿಸಿಕೊಂಡ ಕೂಡಲೇ ಬೆಡ್‍ನ ಬಗ್ಗೆ ಮಾಹಿತಿ ನೀಡದ ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ನೀಡಿದ್ದೇವೆ. ಪ್ರಕೃತಿ ವಿಕೋಪ ಕಾಯ್ದೆಯಡಿ ಕೇಸ್ ದಾಖಲಾದ್ರೆ ಮುಂದಾಗುವ ಅಪಾಯಗಳಿಗೆ ಆಸ್ಪತ್ರೆಗಳೇ ಹೊಣೆ ಎಂದು ಮಂಜುನಾಥ್ ಪ್ರಸಾದ್ ಎಚ್ಚರಿಕೆ ನೀಡಿದರು.
ಬೆಂಗಳೂರು ನಗರದಲ್ಲಿ ಕೋವಿಡ್ ಹಾಗೂ ಕೋವಿಡೇತರ ಸಾವು ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ನಗರದ ಚಿತಾಗಾರಗಳ ಮೇಲೆ ಒತ್ತಡ ಹೆಚ್ಚುತ್ತಿದೆ. ಕೋವಿಡ್ ಚಿತಾಗಾರಗಳಲ್ಲಿ ಕೊರೊನಾ ಇಲ್ಲದವರ ಅಂತ್ಯಕ್ರಿಯೆಯೂ ನಡೆಯುತ್ತಿದೆ. ಹೀಗಾಗಿ ಚಿತಾಗಾರಗಳ ಮೇಲೆ ಒತ್ತಡ ಕಡಿಮೆ ಮಾಡಲು ಇನ್ನಷ್ಟು ಸಿಬ್ಬಂದಿ, ಹೆಚ್ಚುವರಿ ಸಮಯ ನೀಡಲು ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಆಯುಕ್ತರು ತಿಳಿಸಿದ್ದಾರೆ.
ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ
ಬಹು ದಿನಗಳ ತೀವ್ರ ಕುತೂಹಲ ಹಾಗೂ ಒಳಮನೆ ಜಟಾಪಟಿಗೆ ಕೊನೆಗೂ ತೆರೆಬಿದ್ದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಹಿರಿಯ ನಾಯಕ,...








