ಬೆಂಗಳೂರು: ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆ(ಬೆಡ್) ಸೇರಿದಂತೆ ಸರ್ಕಾರ ಹಾಗೂ ಬಿಬಿಎಂಪಿಗೆ ಸಮರ್ಪಕವಾಗಿ ಮಾಹಿತಿ ನೀಡದ ರಾಜಧಾನಿ ಬೆಂಗಳೂರಿನ 291 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಎಲ್ಲಾ ಆಸ್ಪತ್ರೆಗಳೂ ನಿಯಮ ಉಲ್ಲಂಘನೆ ಮಾಡಿಲ್ಲ. ಇಲ್ಲಿಯವರೆಗೆ ಕೇವಲ 3 ಆಸ್ಪತ್ರೆಗಳು ಮಾತ್ರ ಸಮರ್ಪಕ ಮಾಹಿತಿ ನೀಡಿವೆ. ಉಳಿದಂತೆ ಮಾಹಿತಿ ನೀಡಿದ 291 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ನೀಡಲಾಗಿದೆ ಎಂದು ಬಿಬಿಎಂಪಿ ನೂತನ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
ನಾನು ಅಧಿಕಾರ ವಹಿಸಿಕೊಂಡ ಕೂಡಲೇ ಬೆಡ್‍ನ ಬಗ್ಗೆ ಮಾಹಿತಿ ನೀಡದ ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ನೀಡಿದ್ದೇವೆ. ಪ್ರಕೃತಿ ವಿಕೋಪ ಕಾಯ್ದೆಯಡಿ ಕೇಸ್ ದಾಖಲಾದ್ರೆ ಮುಂದಾಗುವ ಅಪಾಯಗಳಿಗೆ ಆಸ್ಪತ್ರೆಗಳೇ ಹೊಣೆ ಎಂದು ಮಂಜುನಾಥ್ ಪ್ರಸಾದ್ ಎಚ್ಚರಿಕೆ ನೀಡಿದರು.
ಬೆಂಗಳೂರು ನಗರದಲ್ಲಿ ಕೋವಿಡ್ ಹಾಗೂ ಕೋವಿಡೇತರ ಸಾವು ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ನಗರದ ಚಿತಾಗಾರಗಳ ಮೇಲೆ ಒತ್ತಡ ಹೆಚ್ಚುತ್ತಿದೆ. ಕೋವಿಡ್ ಚಿತಾಗಾರಗಳಲ್ಲಿ ಕೊರೊನಾ ಇಲ್ಲದವರ ಅಂತ್ಯಕ್ರಿಯೆಯೂ ನಡೆಯುತ್ತಿದೆ. ಹೀಗಾಗಿ ಚಿತಾಗಾರಗಳ ಮೇಲೆ ಒತ್ತಡ ಕಡಿಮೆ ಮಾಡಲು ಇನ್ನಷ್ಟು ಸಿಬ್ಬಂದಿ, ಹೆಚ್ಚುವರಿ ಸಮಯ ನೀಡಲು ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಆಯುಕ್ತರು ತಿಳಿಸಿದ್ದಾರೆ.
ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ
'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ ಬಹುಭಾಷಾ ಚಿತ್ರ ‘ಕೂರ್ಮಾವತಾರ’ದ ಟೀಸರ್ ಅದ್ಧೂರಿಯಾಗಿ ಲೋಕಾರ್ಪಣೆಗೊಂಡಿದೆ. ನರೇಂದ್ರ ಕೊಂಡ ಅರ್ಪಿಸುವ, ಪಂಚವಕ್ತ್ರ ಪಿಕ್ಚರ್ಸ್ ಹಾಗೂ ರುಕ್ವಿನಾ...








