ಮಂಗಳೂರು: ಹೆಮ್ಮಾರಿ ಕೊರೊನಾ ನಾಳೆಯ ಭೀಮನ ಅಮವಾಸ್ಯೆ ಪೂಜೆ ಹಾಗೂ ಶನಿವಾರದ ನಾಗರ ಪಂಚಮಿಗೂ ಬಿಸಿ ಮುಟ್ಟಿಸಿದೆ.
ಮಂಗಳೂರಿನ ಇತಿಹಾಸ ಪ್ರಸಿದ್ದ ಕುಡುಪು ಅನಂತ ಪದ್ಮನಾಭ ದೇವಸ್ಥಾನ ಸೇರಿದಂತೆ ಬಹುತೇಕ ದೇವಸ್ಥಾನಗಳಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ನಾಳೆ ಲಾಕ್‍ಡೌನ್ ಕೂಡ ಜಾರಿಯಲ್ಲಿರುವುದರಿಂದ ಯಾವುದೇ ದೇವಸ್ಥಾನಗಳ ಬಾಗಿಲುಗಳು ಭಕ್ತರಿಗಾಗಿ ತೆರೆಯುವಂತಿಲ್ಲ. ನಾಳೆಯ ಭೀಮನ ಅಮವಾಸ್ಯೆ ಪೂಜೆಗಳು, ಆಷಾಢ ಅಮವಾಸ್ಯೆಯ ಪೂಜಾಕೈಂಕರ್ಯಗಳಿಗೆ ಬ್ರೇಕ್ ಬಿದ್ದಿದೆ. ಅಷ್ಟೇ ಅಲ್ಲದೆ ಜು.25ರ ಶನಿವಾರ ನಾಗರಪಂಚಮಿ ದಿನ ಭಕ್ತರ ಪ್ರವೇಶ ಸಂಪೂರ್ಣ ಬಂದ್ ಆಗಲಿದೆ.
ಮಂಗಳೂರಿನ ಕುಡುಪು ಅನಂತ ಪದ್ಮನಾಭ ದೇವಸ್ಥಾನದಲ್ಲಿ ಪ್ರತೀ ವರ್ಷ ನಾಗರಪಂಚಮಿ ಹಿನ್ನೆಲೆ ಲಕ್ಷಾಂತರ ಭಕ್ತರಿಂದ ಪೂಜೆ ಸಲ್ಲಿಕೆಯಾಗುತ್ತಿತ್ತು. ಇಲ್ಲಿ ನಾಗರ ಪಂಚಮಿಯ ದಿನ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ. ನಾಗರ ಪಂಚಮಿಯ ದಿನದಂದು ಸೇವೆಗಳು, ಸೇವಾ ಪ್ರಸಾದ, ತೀರ್ಥಪ್ರಸಾದ ಮತ್ತು ಅನ್ನ ಸಂತರ್ಪಣೆಗಳು ಇರುವುದಿಲ್ಲ.
ನಾಗರ ಪಂಚಮಿಯ ಪ್ರಯುಕ್ತ ನಾಗ ತಂಬಿಲ, ಪಂಚಾಮೃತ, ಆಶ್ಲೇಷ ಬಲಿ ಮೊದಲಾದ ಯಾವುದೇ ಸೇವೆಗಳು ಇಲ್ಲ ಎಂದು ಕುಡುಪು ಅನಂತ ಪದ್ಮನಾಭ ದೇವಳದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಆಷಾಢ ಅಮವಾಸ್ಯೆ(ಭೀಮನ ಅಮವಾಸ್ಯೆ) ಪ್ರಮುಖವಾಗಿ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ದೇವಸ್ಥಾನದಲ್ಲಿ ವೈಭವದಿಂದ ನಡೆಯುತ್ತಿತ್ತು. ಇಲ್ಲಿಗೆ ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ನೆರೆಯ ಕಾಸರಗೋಡು, ಉಡುಪಿ ಜಿಲ್ಲೆಗಳಿಂದಲ್ಲೂ ಪ್ರತಿವರ್ಷ ಸಾವಿರಾರು ಭಕ್ತರು ಬರುತ್ತಾರೆ. ಭಕ್ತರು ಕಾರಿಂಜದ ಪುಪ್ಕರಿಣಿಯಲ್ಲಿ ಮಿಂದು ಶಿವ ಪಾರ್ವತಿಯ ದರ್ಶನ ಮಾಡುತ್ತಿದ್ದರು. ಇದೇ ಮೊದಲ ಬಾರಿಗೆ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಷಾಢ ಅಮವಾಸ್ಯೆಯ ವೈಭವ ನಡೆಯುವುದಿಲ್ಲ.
ಕದ್ರಿ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ. ಪ್ರತಿ ವರ್ಷ ಇಲ್ಲಿನ ಸಪ್ತ ಕೆರೆಗಳಲ್ಲೂ ತೀರ್ಥಸ್ನಾನ ಮಾಡಿ ಪುಣ್ಯ ಗಳಿಸುತ್ತಿದ್ದ ಭಕ್ತರಿಗೆ ಈ ಬಾರಿ ಪ್ರವೇಶ ನಿರಾಕರಿಸಲಾಗಿದೆ.
ನರಹರಿ ಪವರ್ತ ದೇವಸ್ಥಾನದಲ್ಲೂ ಭಕ್ತರಿಗೆ ಪ್ರವೇಶ ನಿರಾಕರಿಸಲಾಗಿದೆ. ನಾಳೆ ಯಾವುದೇ ದೇವಸ್ಥಾನಗಳಲ್ಲೂ ಭಕ್ತರಿಗೆ ಪ್ರವೇಶ ನಿರಾಕರಿಸಲಾಗಿದೆ. ಕೊರೊನಾ ದಿಂದ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ಮುಜರಾಯಿ ಇಲಾಖೆ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ
ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ನಿನ್ನೆಯಿಂದ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಿದೆ. ಬರೋಬ್ಬರಿ 1,069 ಕೋಟಿ ರೂಪಾಯಿಗಳ ಬೃಹತ್ ವೆಚ್ಚದ ನಾನಾ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ...








