ಕೊರೊನಾ ಎಫೆಕ್ಟ್ : ಲಾಲ್ ಬಾಗ್ ನಲ್ಲಿ ಫ್ಲವರ್ ಶೋ ರದ್ದು

ಬೆಂಗಳೂರು : ಹೆಮ್ಮಾರಿ ಕೊರೊನಾ ವೈರಸ್ ನಿಂದಾಗಿ ಈ ಬಾರಿ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಫಲಪುಷ್ಟ ಪ್ರದರ್ಶನವನ್ನು ರದ್ದು ಮಾಡಲಾಗಿದೆ. ಪ್ರತಿ ವರ್ಷ ಸ್ವಾತಂತ್ರ‍್ಯ ದಿನಾಚರಣೆಗೆ ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ತೋಟಗಾರಿಕಾ ಸಂಘದ ಸಹಯೋಗದಲ್ಲಿ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ ಆಯೋಜನೆ ಮಾಡಲಾಗುತ್ತಿತ್ತು..

ಪ್ರತಿವರ್ಷ ಫ್ಲವರ್ ಶೋಗೆ ಎರಡು ತಿಂಗಳಿಂದಲೇ ಸಿದ್ಧತೆಗಳನ್ನ ನಡೆಸಲಾಗುತ್ತಿತ್ತು. ಆಗಸ್ಟ್ ತಿಂಗಳ ಮೊದಲ ವಾರದಲ್ಲಿಯೇ ಪ್ರದರ್ಶನಕ್ಕೆ ಅನುವು ಮಾಡಲಾಗುತ್ತಿತ್ತು. ಆದರೆ ಈ ವರ್ಷ ಆಗಸ್ಟ್ ಮೊದಲವಾರ ಬಂದರೂ ಯಾವುದೇ ಸಿದ್ಧತೆಗಳು ನಡೆದಿಲ್ಲ.

ಇನ್ನು ಫ್ಲವರ್ ಶೋ ನೋಡಲು ಲಕ್ಷಾಂತರ ಮಂದಿ ಲಾಲ್ ಬಾಗ್ ಬರುತ್ತಾರೆ. ಇದರಿಂದ ಕೊರೊನಾ ಸೋಂಕು ಹೆಚ್ಚಾಗಬಹುದು ಎಂಬ ಕಾರಣಕ್ಕೆ ಈ ಬಾರಿಯ ಫ್ಲವರ್ ಶೋವನ್ನು ರದ್ದುಪಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

Recent Posts

YOU MUST READ

Pin It on Pinterest

Share This