ಚಿಕ್ಕಮಗಳೂರಲ್ಲಿ ಕೊರೊನಾ ಸ್ಫೋಟ : 70 ಮಂದಿಗೆ ಕೊರೊನಾ Corona saaksha tv
ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ ಆತಂಕದ ಮಧ್ಯೆ, ಕೊರೊನಾ ಸೋಂಕಿನ ಆರ್ಭಟವೂ ಹೆಚ್ಚಾಗುತ್ತಿದೆ.
ಕಳೆದ ಕೆಲ ದಿನಗಳಿಂದ ಕೊರೊನಾ ಮತ್ತೆ ತನ್ನ ಕಬಂದಬಾಹುಗಳನ್ನು ಚಾಚಲಾರಂಭಿಸಿದೆ. ಅದರಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗಿದೆ.
ಬಾಳೆಹೊನ್ನೂರಿನ ಸಿಗೋಡುನಲ್ಲಿರುವ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ 70 ಮಂದಿ ಸೋಂಕು ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಸಿಗೋಡು ಜವಾಹರಲಾಲ್ ನವೋದಯ ವಿದ್ಯಾಲಯ ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಆರಂಭದಲ್ಲಿ ಮೂವರು ವಿದ್ಯಾರ್ಥಿಗಳು ಹಾಆಗೂ ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು.
ಹೀಗಾಗಿ ಶಾಲೆಯ ಶಿಕ್ಷಕರು, ಸಿಬ್ಬಂದಿ ವಿದ್ಯಾರ್ಥಿಗಳು ಸೇರಿ 418 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿತ್ತು.
ಈ ಪೈಕಿ 70 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
ಸೋಂಕಿತರದಲ್ಲಿ ರೋಗದ ಲಕ್ಷಣಗಳಿಲ್ಲ. ಹೀಗಾಗಿ ಜಿಲ್ಲಾಡಳಿತ ವಸತಿ ಶಾಲೆಯಲ್ಲಿಯೇ ಎಲ್ಲರನ್ನೂ ಕ್ವಾರಂಟೈನ್ ಮಾಡಿದೆ. ಜೊತೆಗೆ ಆರೋಗ್ಯ ಸಿಬ್ಬಂದಿಯನ್ನೂ ನೇಮಿಸಿದ್ದಾರೆ.









