ಹಾಸನದ ಖಾಸಗಿ ಇಂಜಿನಿಯರ್ ಕಾಲೇಜಿನಲ್ಲಿ ಕೊರೊನಾ ಸ್ಫೋಟ Corona explosion at Hassan’s Private Engineer’s College saaksha tv
ಹಾಸನ : ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಆರ್ಭಟ ಮುಂದುವರೆದಿದ್ದು, ಇದೀಗ ಕಾಲೇಜುಗಳಿಗೆ ಸೋಂಕು ವಕ್ಕರಿಸಿದೆ.
ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಮಲೆನಾಡು ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೊರೊನಾ ಸ್ಫೋಟವಾಗಿದ್ದು, 21 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ.
ಕಾಲೇಜಿನಲ್ಲಿ ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಡಿಎಚ್ಓಗೆ ವಿದ್ಯಾರ್ಥಿಗಳು ಪತ್ರ ಬರೆದಿದ್ದಾರೆ.
ಜನವರಿ 6 ರಂದು ಕಾಲೇಜಿನಲ್ಲಿ ರಕ್ತದಾನ ಶಿಬಿರದ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಸೇರಿ ಸುಮಾರು 400 ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.
ಆನಂತರ ವಿದ್ಯಾರ್ಥಿಗಳಲ್ಲಿ ಶೀತ, ಕೆಮ್ಮ, ಜ್ವರದ ಲಕ್ಷಣಗಳು ಕಾಣಿಸಿಕೊಂಡಿತ್ತು. ವಿದ್ಯಾರ್ಥಿಗಳೇ ಸ್ವಯಂ ಟೆಸ್ಟ್ ಮಾಡಿಸಿದಾಗ ಕೆಲವರಿಗೆ ಕೊರೊನ ಸೋಂಕು ದೃಢಪಟ್ಟಿದೆ.
ಹೀಗಾಗಿ ಕಾಲೇಜಿಗೆ ಭೇಟಿ ನೀಡಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ವಿದ್ಯಾರ್ಥಿಗಳು ಪತ್ರ ಬರೆದಿದ್ದಾರೆ.