ದಕ್ಷಿಣ ಕನ್ನಡದಲ್ಲಿ ಕೊರೊನಾ ಸ್ಫೋಟ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸ್ಫೋಟಗೊಂಡಿದ್ದು, ಮಂಗಳವಾರ 50 ಮಂದಿಯಲ್ಲಿ ಸೋಂಕಿರುವುದು ದೃಢವಾಗಿದೆ.
ಜಿಲ್ಲೆಯಲ್ಲಿ ಒಟ್ಟಾರೆ 34,863 ಸೋಂಕಿತರ ಪೈಕಿ 33,791 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ಈ ವರೆಗೂ ಹೆಮ್ಮಾರಿಗೆ 741 ಮಂದಿ ಮೃತಪಟ್ಟಿದ್ದಾರೆ.
ಇನ್ನುಳಿದಂತೆ ಜಿಲ್ಲೆಯ ವಿವಿಧ ಆಸ್ಪತ್ರೆಗಳು ಹಾಗೂ ಮನೆಗಳಲ್ಲಿ 331 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.