Corona ಎಚ್ಚರ ಜನರೇ ಎಚ್ಚರ : ಮೇ ಅಂತ್ಯದವರೆಗೂ ಕೊರೊನಾ ಸ್ಫೋಟ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಬ್ಬರ ಮುಂದುವರಿದಿದ್ದು, ಮೇ ಅಂತ್ಯದವರೆಗೂ ಕೊರೊನಾ ಸ್ಫೋಟ ಇರಲಿದ್ದು, ಜನರು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸ್ಫೋಟ ಬಗ್ಗೆ ಸುದ್ದಗಾರರೊಂದಿಗೆ ಮಾತನಾಡಿದ ಸುಧಾಕರ್, ರಾಜ್ಯದಲ್ಲಿ ಇನ್ನೆರಡು ತಿಂಗಳು ಕೊರೊನಾ ಅಟ್ಟಹಾಸ ಜೋರಾಗಿರಲಿದೆ. ಮೇ ಅಂತ್ಯದ ವರೆಗೂ ಕೊರೊನಾ ಸ್ಫೋಟವಿರಲಿದ್ದು, ಜನರು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಇನ್ನು ನಿನ್ನೆ ಪ್ರಧಾನಿ ನರೇಂದ್ರ ಮೋದಿ ಕೂಡ ಎಂಟು ರಾಜ್ಯಗಳ ಜೊತೆ ಸಮಾಲೋಚನೆ ನಡೆಸಿದ್ದು, ಸೂಕ್ತ ನಿರ್ಧಾರಗಳನ್ನ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ದಾರೆ. ಸೋಂಕು ಹೆಚ್ಚಾದರೇ ಕಠಿಣ ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ. ನೆರೆಯ ಮಹಾರಾಷ್ಟ್ರದಲ್ಲಿ ಏನ್ ಮಾಡಿದ್ದಾರೆ ಅಂತ ನೋಡಿದ್ದೇವೆ. ಹೀಗಾಗಿ, ಜನರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದರು.
