ಸಿನಿಮಾ ಮಂದಿಗೆ ಶಾಕ್ : ಯುವರತ್ನ, ಕೋಟಿಗೊಬ್ಬನಿಗೆ ಹೊಡೆತ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಿನ್ನೆ ಎರಡು ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿವೆ.
ಈ ಹಿನ್ನೆಲೆ ರಾಜ್ಯದಲ್ಲಿ ಕಟ್ಟು ನಿಟ್ಟಿನ ಕ್ರಮಗಳನ್ನ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದ್ದು, ಥಿಯೇಟರ್ ಗಳಲ್ಲಿ ಶೇ. 50 ರಷ್ಟು ಮಾತ್ರ ಪ್ರೇಕ್ಷಕರಿಗೆ ಅವಕಾಶ ನೀಡುವ ಸಂಬಂಧ ಚಿಂತನೆ ನಡೆಸಿದೆ.
ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಅದರಂತೆ ಥಿಯೇಟರ್ ಗಳಲ್ಲಿ ಶೇ. 50 ರಷ್ಟು ಮಾತ್ರ ಪ್ರೇಕ್ಷಕರಿಗೆ ಅವಕಾಶ ನೀಡುವ ಸಂಬಂಧ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.