ಒಂದೇ ಶಾಲೆಯಲ್ಲಿ 20 ಮಕ್ಕಳಿಗೆ ಕೊರೊನಾ ದೃಢ
ಮಂಡ್ಯ : ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮುಂದುವರೆದ್ದು, ಮಳವಳ್ಳಿ ತಾಲೂಕಿನ ಶಿವನಸಮುದ್ರಂ ಸರ್ಕಾರಿ ಶಾಲೆಯಲ್ಲಿ ಕೊರೊನಾ ಸ್ಫೋಟಗೊಂಡಿದೆ.
ಈ ಶಾಲೆಯಲ್ಲಿ 20 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೇವಲ ಮಕ್ಕಳಿಗೆ ಮಾತ್ರವಲ್ಲದೇ ಅಡುಗೆ ಸಿಬ್ಬಂದಿಗೂ ಕೂಡ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಪೋಷಕರೊಂದಿಗೆ ಓಂ ಶಕ್ತಿ ಯಾತ್ರೆಗೆ ತೆರಳಿದ್ದ ಓರ್ವ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ ಶಾಲೆ ಎಲ್ಲಾ ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು.
ಇದೀಗ ಪರೀಕ್ಷೆಯ ಫಲಿತಾಂಶ ಬಂದಿದ್ದು, 20 ಮಂದಿ ವಿದ್ಯಾರ್ಥಿಗಳಿಗೆ ಸೋಂಕಿರುವುದು ದೃಢಪಟ್ಟಿದೆ.
ಸದ್ಯ ಶಾಲೆಯನ್ನ ಸಂಪೂರ್ಣ ಸ್ಯಾನಿಟೈಜ್ ಮಾಡಲಾಗಿದ್ದು, ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ಇತ್ತ ಮಕ್ಕಳನ್ನ ಕ್ವಾರಂಟೈನ್ ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ.