ಬೆಂಗಳೂರು ; ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದ್ದು, ಬೆಂಗಳೂರಿನ ಶಿವಾಜಿನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ರಾಮುಲು ಟ್ವೀಟ್ ಮಾಡಿದ್ದು, ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನ ಶಿವಾಜಿನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಬೋರಿಂಗ್ ಆಸ್ಪತ್ರೆಗೆ ದಾಖಲಾಗಿದ್ದೇನೆ. ಶೀಘ್ರ ಗುಣಮುಖನಾಗಿ ಬರುವ ವಿಶ್ವಾಸವಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.
https://twitter.com/sriramulubjp/status/1292436769648939008?s=20
ರಾಮುಲು ಅವರಿಗೆ ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆ ಕೋವಿಡ್ ಟೆಸ್ಟ್ ಗೆ ಒಳಪಟ್ಟಾಗ ಸೋಂಕಿರುವುದು ದೃಢಪಟ್ಟಿದೆ. ಈ ಕುರಿತು ರಾಮುಲು ಅವರೇ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.
“ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ” ಎಂದು ಬರೆದುಕೊಂಡಿದ್ದಾರೆ.








