ಬೆಂಗಳೂರು : ಶಾಸಕ ಜಮೀರ್ ಅಹಮದ್ ಅವರಿಗೆ ಕೋವಿಡ್-19 ವೈರಸ್ ಸೋಂಕಿರುವುದು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಜಮೀರ್ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ.
ಜಮೀರ್ ಟ್ವೀಟ್ ನಲ್ಲಿ, “ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ” ಎಂದು ಬರೆದುಕೊಂಡಿದ್ದಾರೆ.
ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ. pic.twitter.com/GYENfTI13R
— B Z Zameer Ahmed Khan (@BZZameerAhmedK) August 18, 2020








