ಹಾಸನದ ವಿಜಯ ಶಾಲೆಯಲ್ಲಿ 10 ಮಕ್ಕಳಿಗೆ ಕೊರೊನಾ
ಹಾಸನ : ಹಾಸನ ಜಿಲ್ಲೆಯ ಶಾಲೆ-ಕಾಲೇಜುಗಳಲ್ಲಿ ಕೊರೊನಾ ಸ್ಫೋಟ ಮುಂದುವರೆದಿದೆ.
ನಿನ್ನೆ ಹಾಸನದ ಸಿಕೆಎಸ್ ಶಾಲೆಯಲ್ಲಿ 51 ಮಕ್ಕಳಿಗೆ ಪಾಸಿಟಿವ್ ಬಂದಿತ್ತು.
ಇದೀಗ ಮತ್ತೊಂದು ಖಾಸಗಿ ಶಾಲೆಯಲ್ಲಿ 10 ಮಕ್ಕಳಿಗೆ ಕೊರೊನಾ ಸೋಂಕು ಪತ್ತೆಯಾಗಿವೆ.
ಜಿಲ್ಲೆಯ ಹಲವು ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ.
ಹೀಗಾಗಿ ಜಿಲ್ಲೆಯಲ್ಲಿ ಶಾಲೆಗಳಿಗೆ ಐದು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.
ಈವರೆಗೂ ಜಿಲ್ಲೆಯಲ್ಲಿ ಒಟ್ಟು 139 ಮಕ್ಕಳು, 55 ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಶಾಲೆಗಳಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವುದರಿಂದ ಪೋಷಕರಲ್ಲಿ ಆತಂಕ ಹೆಚ್ಚಾಗುತ್ತಿದೆ.