ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 18 ವಿದ್ಯಾರ್ಥಿನಿಯರಿಗೆ ಕೊರೊನಾ
ದಾವಣಗೆರೆ : ಹೊನ್ನಾಳಿ ತಾಲೂಕಿನ ಎಚ್.ಕಡದಕಟ್ಟೆಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕೊರೊನಾ ಸ್ಫೋಟಗೊಂಡಿದೆ.
ವಸತಿ ಶಾಲೆಯಲ್ಲಿನ 35 ವಿದ್ಯಾರ್ಥಿನಿಯರ ಪೈಕಿ 18 ಮಕ್ಕಳಿಗೆ ಕೊರೊನಾ ದೃಢಪಟ್ಟಿದೆ.
ಸದ್ಯ ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ಮುಂದುವರೆದಿದ್ದು, ವಸತಿ ಶಾಲೆಯಲ್ಲಿ ಸ್ಯಾನಿಟೈಸರ್ ಸಿಂಪಡನೆ ಕಾರ್ಯ ನಯುತ್ತಿದೆ.
ಇತ್ತ ಈ ಮಾಹಿತಿ ತಿಳಿಯುತ್ತಿದ್ದಂತೆ ಶಾಸಕ ಎಂ.ಪಿ. ರೇಣುಕಾಚಾರ್ಯ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ.
ಇನ್ನು ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಉಳಿದ ವಿದ್ಯಾರ್ಥಿನಿಯರಿಗೂ ಕೊರೊನಾ ಪರೀಕ್ಷೆ ಮಾಡಲಾಗಿದೆ.
ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಾಗ ವಿದ್ಯಾರ್ಥಿನಿಯರು ಕಣ್ಣೀರು ಹಾಕಿದ್ದು, ವಿದ್ಯಾರ್ಥಿನಿಯರಿಗೆ ಶಾಸಕ ರೇಣುಕಚಾರ್ಯ ಧೈರ್ಯ ಹೇಳಿ, ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ಆತ್ಮಸ್ಥೈರ್ಯ ತುಂಬಿದ್ದಾರೆ.