ಬೆಂಗಳೂರು : ಕೊರೊನಾ ಆಂತಕದ ಮಧ್ಯೆ ಇಂದಿನಿಂದ ವಿಧಾನಸಭಾ ಅಧಿವೇಶನ ಆರಂಭವಾಗಿದೆ.
ಹಲವಾರು ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಅಧಿವೇಶನ ಆರಂಭವಾಗಿದ್ದು, ವಿಧಾನಸೌಧ ಸಂಪೂರ್ಣವಾಗಿ ಸ್ಯಾನಿಟೈಸರ್ ಮಾಡಲಾಗಿದೆ.
ಇನ್ನು ಅಧಿವೇಶನಕ್ಕೂ ಮುನ್ನ ಶಾಸಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಲಾಗಿದ್ದು, ಇದರಲ್ಲಿ 20ಕ್ಕೂ ಹೆಚ್ಚು ಅಧಿಕ ಶಾಸಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಹೀಗಾಗಿ ಅಧಿವೇಶನಕ್ಕೆ ಕೇವಲ ಆರವತ್ತು ಶಾಸಕರು ಹಾಜರಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಕೊರೊನಾ ಟೆಸ್ಟ್ ನಲ್ಲಿ ಬಿಜೆಪಿಯ 9, ಕಾಂಗ್ರೆಸ್ ನ 9 ಮತ್ತು ಜೆಡಿಎಸ್ ಮೂವರು ಶಾಸಕರ ಕೊರೊನಾ ವರದಿ ಪಾಸಿಟಿವ್ ಬಂದಿದೆ.
ಕಲಾಪ ಮೊಟಕುಗೊಳಿಸಲು ಸರ್ಕಾರ ನಿರ್ಧಾರ
ಕೊರೊನಾ ಭೀತಿ ಹಿನ್ನೆಲೆ ಸರ್ಕಾರ ಕಲಾಪವನ್ನು ಮೂರು ದಿನಕ್ಕೆ ಮೊಟಕುಗೊಳಿಸಲು ಮುಂದಾಗಿದೆ.
ಈ ಬಗ್ಗೆ ಇಂದು ಸುದ್ದಿಗರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕೊರೊನಾ ಹಿನ್ನೆಲೆ ಅಧಿವೇಶನ ಕಲಾಪವನ್ನು ಕಡಿತಗೊಳಿಸಬೇಕು ಎಂಬ ಅನಿಸಿಕೆ ಇದೆ.
ಈ ಬಗ್ಗೆ ಕಲಾಪ ಸಲಹಾ ಸಮಿತಿಯಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇವೆ. ಇದಕ್ಕೆ ವಿಪಕ್ಷಗಳ ಸಹಕಾರ ಬೇಕಿದೆ ಎಂದು ತಿಳಿಸಿದ್ದಾರೆ.








