ಕೊರೊನಾ ಹಾವಳಿ ನಡುವೆ ಸಂಕಷ್ಟಕ್ಕೆ ಸಿಲುಕಿರುವ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. 21 ಸಾವಿರ ರೂ.ನಿಂದ 30 ಸಾವಿರ ರೂ.ವರೆಗೆ ವೇತನ ಪಡೆಯುವ ನೌಕರರಿಗೆ ಇಎಸ್ಐಸಿ ಸೌಲಭ್ಯ ನೀಡುವ ಸಂಬಂಧ ಕೇಂದ್ರ ಚಿಂತನೆ ನಡೆಸಿದೆ ಎನ್ನಲಾಗಿದೆ. ಕೇಂದ್ರ ಕಾರ್ಮಿಕ ಸಚಿವಾಲಯವು ಇಎಸ್‌ಐಸಿ ನಿಯಮಗಳಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದ್ದು, ಈ ಪ್ರಸ್ತಾವನೆಯನ್ನು ಐಎಸ್‌ಐಸಿ ಮಂಡಳಿಗೆ ಕಳುಹಿಸಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ 21 ಸಾವಿರ ರೂ. ನಿಂದ 30 ಸಾವಿರ ರೂ.ವರೆಗೆ ಸಂಬಳ ಪಡೆಯುವ ಉದ್ಯೋಗಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಂತಾಗಿದೆ. 
ಇನ್ನೂ ಶೀಘ್ರವೇ ಸರ್ಕಾರ ಉದ್ಯೋಗಿಗಳಿಗೆ ಖುಷಿ ಸುದ್ದಿಯೊಂದನ್ನು ನೀಡುವ ಸಾಧ್ಯತೆಯಿದೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ನೌಕರರಿಗೆ ಸಹಕಾರವಾಗುವ ನಿಟ್ಟಿನಲ್ಲಿ ಈ ಚಿಂತನೆ ¸ನಡೆಸಲಾಗುತ್ತಿದ್ದು, ಇ.ಎಸ್.ಐ.ಸಿ. ನಿಯಮಗಳಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ.









