ಬೆಂಗಳೂರು: ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಆದರೆ ಮಳೆ ಬಂದ್ರೆ ಕೊರೊನಾ ಹರಡುವ ಸಾಧ್ಯತೆ ಹೆಚ್ಚಿದೆ ಎಂದು ಭೂಗರ್ಭ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಳೆಯಲ್ಲಿ ಕೊರೊನಾ ವೈರಸ್ ವ್ಯಾಪಕತೆ ಹೆಚ್ಚಾಗುತ್ತಂತೆ. ಅಲ್ಲದೇ ಮಳೆಯಿಂದ ಭೂಮಿಯಲ್ಲಿ ಈ ವೈರಸ್ ನೆಲೆಗೊಳ್ಳಲು ಬಹು ಸುಲಭ. ಹೀಗಾಗಿ ನೀರಿನಲ್ಲಿ ವೈರಸ್ ಸೇರಿಕೊಂಡು ಕುಡಿಯುವ ನೀರಿನ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಮಳೆಯಿಂದ ಕೊರೊನಾ ವೈರಸ್ ಹರಡುವ ಸಾಧ್ಯತೆಯಿದೆ ಎಂದು ಭೂಗರ್ಭ ತಜ್ಞರು ಹೇಳಿದ್ದಾರೆ. ಅಲ್ಲದೆ ಮಳೆಗಾಲದ ಮುಂಚೆಯೇ ಇದಕ್ಕೆ ಕಡಿವಾಣ ಹಾಕಬೇಕು. ಇಲ್ಲದಿದ್ದರೇ ಪರಿಸ್ಥಿತಿ ಕೈ ಮೀರಿ ಹೋಗುವ ಸಾಧ್ಯತೆಗಳಿವೆ ಎಂದು ಭೂಗರ್ಭ ಶಾಸ್ತ್ರಜ್ಞರು ಎಚ್ಚರಿಕೆ ನೀಡಿದ್ದಾರೆ.
ಪರೀಕ್ಷಾ ವ್ಯವಸ್ಥೆ ಹಾಳು ಮಾಡಿದ BJP: ಮಧು ಬಂಗಾರಪ್ಪ ವಾಗ್ದಾಳಿ
ಮಧು ಬಂಗಾರಪ್ಪ ಅವರು BJP ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಅನಗತ್ಯ ಗಲಾಟೆ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಪಾರದರ್ಶಕ ಹಾಗೂ...








