ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಆರು ಕೋಟಿ ಜನರನ್ನು ತೀವ್ರ ಬಡತನಕ್ಕೆ ತಳ್ಳಲಿರುವ ಕೊರೊನಾ – ವಿಶ್ವ ಬ್ಯಾಂಕ್…

admin by admin
May 21, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

world-bankವಾಷಿಂಗ್ಟನ್, ಮೇ 21 : ಮನುಕುಲಕ್ಕೆ ಮಾರಕವಾಗಿ ಪರಿಣಮಿಸಿರುವ ಕೊರೋನಾ ವೈರಸ್ ಸೋಂಕು ವಿಶ್ವದ ವಿವಿಧ ರಾಷ್ಟ್ರಗಳಲ್ಲಿ 6 ಕೋಟಿ ಮಂದಿಯನ್ನು ‌ ಅತಿ ಬಡತನಕ್ಕೆ ದೂಡಲಿದೆ ಎಂದು ವಿಶ್ವ ಬ್ಯಾಂಕ್ ಮುಖ್ಯಸ್ಥರು ‌ಅಭಿಪ್ರಾಯಪಟ್ಟಿದ್ದಾರೆ. ಕೊರೋನಾ ಸೋಂಕು ಜಗತ್ತಿನಾದ್ಯಂತ ವ್ಯಾಪಕವಾಗಿ ಹರಡಿರುವ ಪರಿಣಾಮ ಯಾವುದೂ ಮೊದಲಿನಂತಿಲ್ಲ. ಎಲ್ಲವೂ ಅಸ್ತವ್ಯಸ್ತವಾಗಿದ್ದು, ದೇಶಗಳ ಆರ್ಥಿಕತೆಯನ್ನು ಬುಡಮೇಲು ಮಾಡಿದೆ. ಕೊರೋನಾದಿಂದ ಉಂಟಾಗಿರುವ ಬಿಕ್ಕಟ್ಟಿನ ಪರಿಸ್ಥಿತಿಯಿಂದ ಬಡ ದೇಶಗಳಿಗೆ ದೊಡ್ಡ ಹೊಡೆತ ಬಿದ್ದಿದ್ದು, ಬಡತನದ ತೀವ್ರತೆಯನ್ನು ಹೆಚ್ಚಿಸಿದೆ ಎಂದು ವಿಶ್ವಬ್ಯಾಂಕ್ ಮುಖ್ಯಸ್ಥರು ಎಚ್ಚರಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಸಾಧಿಸಿದ ಲಾಭವನ್ನು ಅಳಿಸಿ ಹಾಕಿ ದುಡಿಮೆಯನ್ನು ಕಿತ್ತು ಕೊಂಡಿದೆ ಮಾತ್ರವಲ್ಲ ಸುಮಾರು 6 ಕೋಟಿ ಜನರನ್ನು ತೀವ್ರ ಬಡತನಕ್ಕೆ ಕೊರೊನಾ ವೈರಸ್​ನ ಬಿಕ್ಕಟ್ಟು ತಳ್ಳಲಿದೆ. ಇದರಿಂದಾಗಿ ಆರ್ಥಿಕ ಹಿಂಜರಿತ ಉಂಟಾಗಲಿದೆ ಎಂದು ಹೇಳಿದ್ದಾರೆ.

 

Related posts

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

August 13, 2026
ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

August 13, 2026

ವಿಶ್ವ ಬ್ಯಾಂಕ್ ವಿಶ್ವದ 100 ರಾಷ್ಟ್ರಗಳ ವಿವಿಧ ಯೋಜನೆಗಳಿಗೆ ಹಣಕಾಸಿನ ನೆರವು ಒದಗಿಸುತ್ತಿದ್ದು, ಮುಂದಿನ 15 ತಿಂಗಳಿನಲ್ಲಿ 160 ಶತಕೋಟಿ ಡಾಲರ್ ಮೊತ್ತವನ್ನು ವಿವಿಧ ದೇಶಗಳಲ್ಲಿ ವಿನಿಯೋಗಿಸಲಿದೆ ಎಂದು ಬ್ಯಾಂಕ್ ಅಧ್ಯಕ್ಷ ಡೇವಿಡ್ ಮಲ್ಪಾಸ್ ಕಾನ್ಫರೆನ್ಸ್ ಕಾಲ್ ನಲ್ಲಿ ಹೇಳಿದ್ದಾರೆ. ಕೊರೋನಾ ಉಂಟು ಮಾಡಿರುವ ಬಿಕ್ಕಟ್ಟಿನಿಂದ ವಿಶ್ವದ ‌ಅರ್ಥಿಕತೆ ಶೇಕಡಾ ‌5ರಷ್ಟು ಕಡಿಮೆ ಯಾಗ ಬಹುದು ಎಂದು ಅಭಿಪ್ರಾಯ ಪಟ್ಟ ಮಲ್ಪಾಸ್ ಬಡ ದೇಶಗಳ ಮೇಲೆ ಇದರ ಪರಿಣಾಮ ಬಹಳಷ್ಟು ಕೆಟ್ಟದಾಗಿ ಇರುತ್ತದೆ ಎಂದು ಹೇಳಿದ್ದಾರೆ.n ಬಡತನ ನಿರ್ಮೂಲನ ಕಾರ್ಯಕ್ರಮಗಳ ಮೂಲಕ ಕಳೆದ ಮೂರು ವರ್ಷಗಳಿಂದ ಸಾಧಿಸಲಾದ ಪ್ರಗತಿಯನ್ನು ಕೊರೊನಾ ವೈರಸ್ ಎಂಬ ವೈರಾಣು ಬೂದಿ ಮಾಡಿದ್ದು, ಮುಂದಿನ ದಿನಗಳಲ್ಲಿ ವಿಶ್ವವನ್ನೇ ಕೆಟ್ಟ ಅರ್ಥಿಕ ಹಿಂಜರಿತ ‌ಕಾಡಲಿದೆ ಎಂದು ಬ್ಯಾಂಕ್ ಅಧ್ಯಕ್ಷ ಡೇವಿಡ್ ಮಲ್ಪಾಸ್ ಅಭಿಪ್ರಾಯ ಪಟ್ಟಿದ್ದಾರೆ.

ಇಲ್ಲಿಯವರೆಗೆ ಜಗತ್ತಿನಾದ್ಯಂತ ಕೋಟ್ಯಾಂತರ ಜನರನ್ನು ಕೊರೊನಾ ಸೋಂಕು ಬಾಧಿಸಿದ್ದು, ಲಕ್ಷಾಂತರ ಜನರ ಜೀವವನ್ನು ಕೊರೊನಾ ವೈರಸ್ ಬಲಿ ತೆಗೆದು ಕೊಂಡಿದೆ.
ಡಿಸೆಂಬರ್ ನಲ್ಲಿ ಚೀನಾದ ವುಹಾನ್ ನಲ್ಲಿ ಕಾಣಿಸಿಕೊಂಡ ಕೊರೊನಾ ವೈರಸ್ ನಂತರ ವಿಶ್ವದ ಇತರ ರಾಷ್ಟ್ರಗಳಿಗೂ ಹಬ್ಬಿ ಲಕ್ಷಾಂತರ ಜನರ ಸಾವಿಗೆ ಕಾರಣವಾಗಿದೆ.‌ ಕೊರೊನಾ ದ ಭೀತಿಯಿಂದಾಗಿ ಬಹುತೇಕ ರಾಷ್ಟ್ರಗಳು ಸುಮಾರು ಮೂರು ತಿಂಗಳಿನಿಂದ ಲಾಕ್ ಡೌನ್ ಆದೇಶ ಜಾರಿಗೊಳಿಸಿದ್ದು, ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿದ್ದವು. ಇದರಿಂದ ದೇಶದೆಲ್ಲೆಡೆ ಬಿಕ್ಕಟ್ಟು ಉಂಟಾಗಿದ್ದು, ಜಾಗತಿಕ ಅರ್ಥಿಕ ಸಂಕಷ್ಟ ಉಂಟಾಗಿದೆ.

ವಿಶ್ವ ಬ್ಯಾಂಕ್ ಇಲ್ಲಿಯವರೆಗೆ ಬಡ ದೇಶಗಳ ಆರೋಗ್ಯ ವ್ಯವಸ್ಥೆ ಸುಧಾರಿಸಲು, ಆರ್ಥಿಕ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳಿಗಾಗಿ 5.5 ಶತಕೋಟಿ ಡಾಲರ್ ವ್ಯಯಿಸಿದೆ.‌
ಕೊರೊನಾದಿಂದ ಉಂಟಾಗಿರುವ ಬಿಕ್ಕಟ್ಟಿನಿಂದ ಬಡದೇಶಗಳ ಪರಿಸ್ಥಿತಿ ಸುಧಾರಿಸಲು ವಿಶ್ವ ಬ್ಯಾಂಕ್ ನೆರವು ಒಂದೇ ಸಾಕಾಗದು, ಶ್ರೀಮಂತ ದೇಶಗಳು ದ್ವಿಪಕ್ಷೀಯ ಸಹಕಾರಕ್ಕೆ ಒತ್ತು ನೀಡಿ, ಬಡ ದೇಶಗಳ ಆರ್ಥಿಕ ಅಭಿವೃದ್ಧಿಗೆ ನೆರವಾಗಬೇಕು ಎಂದು ಮಾಲ್ಪಾಸ್ ಕರೆ ನೀಡಿದ್ದಾರೆ. ಅಭಿವೃದ್ಧಿ ಶೀಲ ದೇಶಗಳ ಆದಾಯದ ಮೂಲ‌‌ ಅಲ್ಲಿನ ನಾಗರಿಕರು ಬೇರೆ ದೇಶಗಳಿಗೆ ಹೋಗಿ ದುಡಿದು ಗಳಿಸುವ ಹಣ ಮತ್ತು ಪ್ರವಾಸೋದ್ಯಮ ಆದಾಯಗಳನ್ನು ಅವಲಂಬಿಸಿದೆ. ಆರ್ಥಿಕತೆಯ ಪುನಶ್ಚೇತನಕ್ಕೆ ಇದು ಅನಿವಾರ್ಯ ಕೂಡ ಆಗಿದೆ ಎಂದು ತಿಳಿಸಿದರು. ಅಭಿವೃದ್ಧಿ ಪ್ರಮಾಣ ಕಡಿಮೆ ಇರುವ ದೇಶಗಳಿಗೆ ನೀಡಿರುವ ಸಾಲದ ಮರು ಪಾವತಿ ಕಂತನ್ನು ಒಂದು ವರ್ಷದ ಅವಧಿಗೆ ಮುಂದೂಡುವ ಪ್ರಸ್ತಾವಕ್ಕೆ ಪೂರಕ ಸ್ಪಂದನೆ ವ್ಯಕ್ತವಾಗಿದ್ದು, ಇಲ್ಲಿಯವರೆಗೆ ಸುಮಾರು 14 ದೇಶಗಳು ಈ ಪ್ರಸ್ತಾವವನ್ನು ಅನುಮೋದಿಸಿವೆ. ಉಳಿದ ದೇಶಗಳಿಂದ ಕೂಡ ಆಶಾದಾಯಕ ಸ್ಪಂದನೆ ವ್ಯಕ್ತವಾಗಿದೆ ಎಂದು ವಿಶ್ವ ಬ್ಯಾಂಕ್ ಮುಖ್ಯಸ್ಥರು ಹೇಳಿದರು.

Tags: World Bank
ShareTweetSendShare
Join us on:

Related Posts

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

by Shwetha
August 13, 2026
0

ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...

ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

by Shwetha
August 13, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಆಗಸ್ಟ್ 3ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ...

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

by Shwetha
August 13, 2026
0

ನಟ ಪ್ರಕಾಶ್ ರಾಜ್ ಅವರ ಹೆಸರು ಶಾಂತಿನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಇನ್ನೂ ನೋಂದಣಿಯಲ್ಲಿದ್ದು, ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅವರ ಹೆಸರನ್ನು ಅಳಿಸಲಾಗಿಲ್ಲ...

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

by Shwetha
August 13, 2026
0

ನವದೆಹಲಿ: ಸಂಸತ್ ಆವರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಪತ್ರಕರ್ತರನ್ನು ಇಲಿಗಳಿಗೆ ಹೋಲಿಸಿ...

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

by Shwetha
August 13, 2026
0

ಬೆಂಗಳೂರು: ರಾಜಧಾನಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ನಡೆಸಿದ ದಿಢೀರ್ ದಾಳಿ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ ಕಾರ್ಯಾಚರಣೆ ವೇಳೆ ಜೈಲಿನಲ್ಲಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram