ಕೊರೊನಾ ಹೆಚ್ಚಳ : ಕೇರಳದಲ್ಲಿ ವೀಕೆಂಡ್ ಲಾಕ್ ಡೌನ್ lockdown
ತಿರುವನಂತಪುರಂ : ಕೇರಳದಲ್ಲಿ ಕೊರೊನಾ ಅಬ್ಬರ ಶುರುವಾಗಿದೆ. ದೇಶದಲ್ಲಿ ಪತ್ತೆಯಾಗುತ್ತಿರುವ ಕೊರೊನಾ ಸೋಂಕು ಪ್ರಕರಣಗಳ ಪೈಕಿ, ಅರ್ಧದಷ್ಟು ಕೇಸ್ ಗಳು ಕೇರಳದಲ್ಲೇ ಪತ್ತೆಯಾಗುತ್ತಿವೆ.
ಈ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜುಲೈ 31 ಮತ್ತು ಆಗಸ್ಟ್ 1 ರಂದು ಕೇರಳದಲ್ಲಿ ಸಂಪೂರ್ಣ ಲಾಕ್‍ಡೌನ್ ಹೇರಲಾಗಿದೆ.
ಕಳೆದೆರೆಡು ದಿನಗಳಿಂದ ಕೇರಳದಲ್ಲಿ 40 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಕೊರೊನಾ ಪತ್ತೆಯಾಗಿದೆ.
ಹೊಸತಾಗಿ ದೃಢಪಡುತ್ತಿರುವ ಸೋಂಕು ಪ್ರಮಾಣದ ಶೇ.50ರಷ್ಟು ಕೇರಳದಲ್ಲಿಯೇ ಇದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ.
ಬುಧವಾರ ಒಂದೇ ದಿನ 22,056 ಹೊಸ ಪ್ರಕರಣಗಳು ದಾಖಲಾಗಿದ್ದು, 131 ಮಂದಿ ಸೋಂಕಿತರು ಅಸುನೀಗಿದ್ದಾರೆ.
ಕೊರೊನಾ ನಿಯಂತ್ರಣದಲ್ಲಿ ಮೊದಲು ಕೇರಳ ರಾಜ್ಯ ಮಾದರಿಯಾಗಿತ್ತು. ಆದ್ರೆ ಇದೀಗ ಕೇರಳದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದೆ.










