ಕೋಲ್ಕತ್ತಾ : ಲಾಕ್ ಡೌನ್ ಹೊರತಾಗಿಯೂ ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದರಿಂದ ಜನರಲ್ಲಿ ಕೊರೊನಾ ಭೀತಿ ಹೆಚ್ಚಾಗುತ್ತಿದ್ದು, ಇಂದು ದೇಶದಲ್ಲಿ ಮತ್ತೆ ಇಬ್ಬರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 29 ಕ್ಕೆ ಏರಿಕೆಯಾಗಿದೆ.
ಪಶ್ಚಿಮ ಬಂಗಾಳದಲ್ಲಿ 44 ವರ್ಷದ ಮಹಿಳೆಯೊಬ್ಬರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಪಶ್ಚಿಮ ಬಂಗಾಳದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಹೇರಿಕೆಯಾಗಿದೆ. ಮೃತ ಮಹಿಳೆಗೆ ಚಿಕಿತ್ಸೆ ನೀಡಿದ ವೈದ್ಯರು, ನರ್ಸ್, ಆಸ್ಪತ್ರೆಯ ಸಿಬ್ಬಂದಿಯನ್ನು ಐಸೋಲೇಷನ್ ನಲ್ಲಿ ಇರಿಸಲಾಗಿದೆ.
ಇನ್ನು ಪಂಜಾಬ್ ನ ಅಮೃತ್ ಸರದಲ್ಲಿ 60 ವರ್ಷದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ವೈರಸ್ ಗೆ ಪಂಜಾಬ್ ನಲ್ಲಿ 2 ನೇ ಬಲಿಯಾಗಿದೆ. ಒಟ್ಟಾರೆ ಭಾರತದಲ್ಲಿ ವೈರಸ್ ಗೆ 29 ಜನರು ಮೃತಪಟ್ಟಿದ್ದು, ಸೋಂಕಿತರ ಸಂಖ್ಯೆ 1,024 ಕ್ಕೆ ಏರಿಕೆಯಾಗಿದೆ.








