ಕೊರೊನಾ ಹೆಚ್ಚಳ : ಮತ್ತೆ ಲಾಕ್ ಡೌನ್ ಜಾರಿ Lockdown
ನಾಗ್ಪುರ : ದೇಶದಲ್ಲಿ ಕೊರೊನಾ ವೈರಸ್ ಮತ್ತೆ ಅಬ್ಬರಿಸಲು ಶುರು ಮಾಡಿದ್ದು, ಜನರನ್ನ ಮತ್ತೆ ಆತಂಕಕ್ಕೆ ದೂಡಿದೆ.
ಅದರಲ್ಲೂ ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಅಲ್ಲಿನ ಸರ್ಕಾರ ನಾಗ್ಪುರದಲ್ಲಿ ಲಾಕ್ ಡೌನ್ ಜಾರಿ ಮಾಡಿದೆ.
ಮಹಾ ಸರ್ಕಾರ ನಾಗ್ಪುರದಲ್ಲಿ ಒಂದು ವಾರದ ಕಾಲ ಲಾಕ್ ಡೌನ್ ಜಾರಿ ಮಾಡಿ ಆದೇಶಿಸಿದೆ.
ಈ ಆದೇಶ ಇಂದಿನಿಂದಲೇ ಜಾರಿಬಂದಿದ್ದು, ಅಲ್ಲಿನ ರಸ್ತೆಗಳು ಬಿಕೋ ಎನ್ನುತ್ತಿವೆ.
ರಸ್ತೆಗಳ ಮೇಲೆ ಜನ ಕಾಣಿಸಿಕೊಳ್ಳುತ್ತಿಲ್ಲ. ಆದರೆ ಇಲ್ಲಿನ ದಾದರ್ ಮಾರುಕಟ್ಟೆ ಪ್ರದೇಶದಲ್ಲಿ ಜನಸಂದಣಿ ಕಂಡುಬಂದಿದೆ.
ಇತ್ತ ರಾಜ್ಯದಲ್ಲೂ ಕೂಡ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಿಎಂ ಬಿಎಸ್ ಯಡಿಯೂರಪ್ಪ ಸಭೆಗಳನ್ನು ನಡೆಸುತ್ತಿದ್ದಾರೆ.
