ಕೊರೊನಾ ಹೆಚ್ಚಳ : 10 ರಾಜ್ಯಗಳ ಸಿಎಂಗಳ ಜೊತೆ ಪಿಎಂ ಸಭೆ PM meeting
ಬೆಂಗಳೂರು : ಭಾರತದಲ್ಲಿ ಕೊರೊನಾ ರಣ ಕೇಕೆ ಹಾಕುತ್ತಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂವಾದ ನಡೆಸಲಿದ್ದಾರೆ. ಇದರಲ್ಲಿ ಬಿ.ಎಸ್.ಯಡಿಯೂರಪ್ಪ ಕೂಡ ಭಾಗಿಯಾಗಲಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ಸಭೆ ಆರಂಭವಾಗಳಿದ್ದು, ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಸಂವಾದದಲ್ಲಿ ಸಿಎಂ ಯಡಿಯೂರಪ್ಪ ಭಾಗಿಯಾಗಲಿದ್ದಾರೆ. ಆರೋಗ್ಯ ಸಚಿವ ಡಾ. ಸುಧಾಕರ್ ಸಾಥ್ ನೀಡಲಿದ್ದಾರೆ.
ಸಭೆಯಲ್ಲಿ ಸಿಎಂ ಬಿಎಸ್ ವೈ ರಾಜ್ಯದಲ್ಲಿ ಕೊರೊನಾ ತಡೆಗೆ ಜಾರಿಗೆ ತಂದಿರುವ ಕಠಿಣ ಮಾರ್ಗಸೂಚಿ, ನೈಟ್ ಕಫ್ರ್ಯೂ, ವೀಕೆಂಡ್ ಕಫ್ರ್ಯೂ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ.