ಕೊರೊನಾ corona ಹೆಚ್ಚಳ : ಶಾಲಾ – ಕಾಲೇಜು ಬಂದ್ corona-increase-school-college-band
ರಾಯ್ಪುರ : ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಛತ್ತೀಸ್ ಗಢದಲ್ಲಿ ಶಾಲೆ-ಕಾಲೇಜು ಮತ್ತು ಅಂಗನವಾಡಿಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವ ರವೀಂದ್ರ ಚೌಬೆ ಹೇಳಿದ್ದಾರೆ.
ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ನಿನ್ನೆ ರಾತ್ರಿ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಭಗೇಲ್ ತಮ್ಮ ಮಂತ್ರಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಬಳಿಕ ಶಾಲಾ ಕಾಲೇಜು ಬಂದ್ ಮಾಡುವ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವ ಅವರು, ಕೊರೊನಾ ಪ್ರಕರಣಗಳ ಏರಿಕೆಯನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ಆದೇಶದವರೆಗೆ ಎಲ್ಲಾ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ನಿರ್ಧರಿಸಿದೆ. 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಹೊರತುಪಡಿಸಿ, ಇತರ ಯಾವುದೇ ಕ್ಲಾಸ್ ಗಳ ಪರೀಕ್ಷೆಗಳು ನಡೆಯುವುದಿಲ್ಲ ಮತ್ತು ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಪಾಸ್ ಮಾಡಲಾಗುವುದು” ಎಂದು ತಿಳಿಸಿದ್ದಾರೆ. corona-increase-school-college-band