ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 22 ಲಕ್ಷದ ಗಡಿ ದಾಡಿದೆ.
ಕೇಂದ್ರ ಆರೋಗ್ಯ ಇಲಾಖೆಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 62,064 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 22,15,075ಕ್ಕೆ ತಲುಪಿದೆ. ಇನ್ನು ನಿನ್ನೆ ದಾಖಲೆಯ 1,007 ಮಂದಿ ಮಹಾಮಾರಿ ವೈರಸ್ ಗೆ ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 44,386ಕ್ಕೆ ಏರಿಕೆಯಾಗಿದೆ.
ಏತನ್ಮಧ್ಯೆ ದೇಶದ ಒಟ್ಟು 22,15,075 ಮಂದಿ ಸೋಂಕಿತರ ಪೈಕಿ 15,35,744 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇನ್ನುಳಿದಂತೆ 6,34,945 ಮಂದಿ ಸೋಂಕಿನಿಂದ ಬಳಲುತ್ತಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.








