ಮುಂಬೈ, ಜುಲೈ 11: ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಂದು ಸಂಜೆ ಮುಂಬೈನ ನಾನಾವತಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿತ್ತು.
ಸ್ವತಃ ಅಮಿತಾಭ್ ಬಚ್ಚನ್ ಅವರೇ ತಮ್ಮ ಟ್ವಿಟರ್ ಖಾತೆಯ ಮುಖಾಂತರ ತಮಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ನನಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬದವರು, ಸಿಬ್ಬಂದಿಗಳು ಕೊರೊನಾ ತಪಾಸಣೆಗೆ ಒಳಪಟ್ಟಿದ್ದು ಅವರ ವರದಿಗಾಗಿ ಕಾಯುತ್ತಿದ್ದೇವೆ ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.

ಅಲ್ಲದೇ ನನ್ನನ್ನು ಕಳೆದ 10 ದಿನಗಳಲ್ಲಿ ಭೇಟಿಯಾದ ಮತ್ತು ಪ್ರಾಥಮಿಕ ಸಂಪರ್ಕಕ್ಕೆ ಬಂದ ಎಲ್ಲರೂ ದಯವಿಟ್ಟು ಕೊವಿಡ್-19 ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.








