ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಕೊರೊನಾ ಸೋಂಕು
1 min read
New Delhi, Aug 23 (ANI): Delhi Chief Minister Arvind Kejriwal during an interaction with traders in New Delhi on Sunday. (ANI Photo)
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಕೊರೊನಾ ಸೋಂಕು Arvind Kejriwal saaksha tv
ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಕೊರೊನಾ ಸೋಂಕು ವಕ್ಕರಿಸಿದೆ. ಈ ಬಗ್ಗೆ ಕೇಜ್ರಿವಾಲ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದ್ದಾರೆ.
ಕೇಜ್ರಿವಾಲ್ ತಮ್ಮ ಟ್ವೀಟ್ ನಲ್ಲಿ.. ನಾನು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ. ಈ ವೇಳೆ ಸೋಂಕು ಇರುವುದು ದೃಢಪಟ್ಟಿದೆ. ನನಗೆ ಸೋಂಕಿನ ಗುಣಲಕ್ಷಣಗಳು ಕಡಿಮೆಯಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತೇನೆ ಎಂದು ತಿಳಿಸಿದ್ದಾರೆ.
ಅಲ್ಲದೇ ಕಳೆದ ಕೆಲವು ದಿನಗಳಲ್ಲಿ ನನ್ನನ್ನು ಯಾರ್ಯಾರು ಭೇಟಿ ಮಾಡಿದ್ದಿರೋ ಅವರೆಲ್ಲರೂ ದಯವಿಟ್ಟು ಟೆಸ್ಟ್ ಮಾಡಿಸಿಕೊಳ್ಳಿ. ಜೊತೆಗೆ ತಮ್ಮನ್ನು ತಾವು ಕ್ವಾರಂಟೈನ್ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಇತ್ತ ದೆಹಲಿಯಲ್ಲಿ ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 4,099 ಹೊಸ ಕೇಸ್‍ಗಳು ಪತ್ತೆಯಾಗಿದೆ.