ತೆಲಂಗಾಣದ ಬಿಜೆಪಿ ಶಾಸಕನ ಗನ್ ಮ್ಯಾನ್ ಗೆ ಕೊರೋನಾ ಸೋಂಕು
ಹೈದರಾಬಾದ್, ಜೂನ್ 22: ತೆಲಂಗಾಣದ ಬಿಜೆಪಿ ಶಾಸಕ ರಾಜ ಸಿಂಗ್ ಅವರ ಗನ್ಮ್ಯಾನ್ಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ಶಾಸಕ ರಾಜ ಸಿಂಗ್ ಅವರು ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ತಮ್ಮ ಗನ್ ಮ್ಯಾನ್ ಗೆ ಕೊರೊನಾ ಸೋಂಕು ತಗುಲಿರುವುದು ಗೊತ್ತಾಗುತ್ತಿದ್ದಂತೆ ಗೋಶಮಹಲ್ ನ ಬಿಜೆಪಿ ಶಾಸಕ ರಾಜ ಸಿಂಗ್ ಸ್ವಯಂ ತಾವೇ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಅಷ್ಟೇ ಅಲ್ಲ ಅವರ ಕುಟುಂಬ ಸದಸ್ಯರು ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಶಾಸಕ ರಾಜ ಸಿಂಗ್ ತಮ್ಮ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಹೋಂ ಕ್ವಾರಂಟೈನ್ ನಲ್ಲಿದ್ದುಕೊಂಡು ವ್ಯಾಯಾಮ ಮಾಡುತ್ತಿರುವ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ವ್ಯಾಯಾಮದಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಆದ್ದರಿಂದ ಎಲ್ಲರೂ ವ್ಯಾಯಾಮ ಮಾಡುವಂತೆ ಟ್ವಿಟರ್ ನಲ್ಲಿ ಕೇಳಿ ಕೊಂಡಿದ್ದಾರೆ.
ತೆಲಂಗಾಣದಲ್ಲಿ ಇಲ್ಲಿಯವರೆಗೆ 7072 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 203 ಮಂದಿ ಮೃತಪಟ್ಟಿದ್ದಾರೆ