ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 93 ಲಕ್ಷಕ್ಕೆ ಏರಿಕೆ
ನವದೆಹಲಿ : ದೇಶದಲ್ಲಿ ಸರಣಿ ಹಬ್ಬಗಳ ಆಚರಣೆ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಏರಿಕೆ ಕಾಣುತ್ತಿದ್ದು, ಇದೀಗ ಕೊರೊನಾ ಸೋಂಕಿತರ ಸಂಖ್ಯೆ 93 ಲಕ್ಷಕ್ಕೆ ಬಂದು ನಿಂತಿದೆ.
ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 43,082 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿ 492 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 93,09,788 ಕ್ಕೆ ಕೊರೊನಾಗೆ ಬಲಿಯಾದವರ ಸಂಖ್ಯೆ 1,35,715ಕ್ಕೆ ಏರಿಕೆಯಾಗಿದೆ.
ಇನ್ನು ಒಟ್ಟಾರೆ 93,09,788 ಮಂದಿ ಕೊರೊನಾ ಸೋಂಕಿತರ ಪೈಕಿ ಇದುವರೆಗೂ 87,18,517 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ರಾಷ್ಟ್ರೀಯ ಚೇತರಿಕೆ ಪ್ರಮಾಣ ಶೇ.93.64ಕ್ಕೆ ಹೆಚ್ಚಳವಾಗಿದೆ. ದೇಶದಲ್ಲಿನ್ನು 4,55,555 ಸಕ್ರಿಯ ಪ್ರಕರಣಗಳಿವೆ.
ನಿನ್ನೆ ಒಂದೆ ದಿನ 11,31,204 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, ದೇಶದ್ಯಾಂತ ಸುಮಾರು 14 ಕೋಟಿ ಮಂದಿಯನ್ನು ರೋಗ ತಪಸಾಣೆಗ ಒಳಪಡಿಸಲಾಗಿದೆ ಎಂದು ಐಸಿಎಂಆರ್ ಮೂಲಗಳು ಉಲ್ಲೇಖಿಸಿವೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










