ರಾಕ್ ಲೈನ್ ವೆಂಕಟೇಶ್ ಗೆ ಕೊರೊನಾ ಸೋಂಕು
ಬೆಂಗಳೂರು, ಜುಲೈ 8: ರಾಜ್ಯದಲ್ಲಿ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿದ್ದು, ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಬೆನ್ನಲ್ಲೇ ನಿರ್ಮಾಪಕ, ನಟ ರಾಕ್ ಲೈನ್ ವೆಂಕಟೇಶ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಸುಮಲತಾ ಅಂಬರೀಶ್ ಅವರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಜೊತೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ರಾಕ್ ಲೈನ್ ವೆಂಕಟೇಶ್ ಕ್ವಾರಂಟೈನ್ ಗೆ ಒಳಗಾಗಿದ್ದರು. ಆದರೆ ಇದೀಗ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ರಾಕ್ ಲೈನ್ ವೆಂಕಟೇಶ್ ಅವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಅವರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ವರದಿ ಬಂದಿದೆ. ರಾಕ್ ಲೈನ್ ವೆಂಕಟೇಶ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.








