ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೊನಾ ‌ಸೋಂಕು

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೊನಾ ‌ಸೋಂಕು 

ಹೊಸದಿಲ್ಲಿ, ಅಗಸ್ಟ್ 2: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ‌ ಕೊರೋನಾ ಸೋಂಕು ದೃಢಪಟ್ಟಿದೆ. ಕೋವಿಡ್-19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ‌ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಅಮಿತ್ ಶಾ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.


ಅಮಿತ್ ಶಾ ಅವರು ತಮಗೆ ಕೋವಿಡ್-19 ಸೋಂಕು ತಗುಲಿರುವುದರ ಬಗ್ಗೆ  ತಮ್ಮ ಟ್ವಿಟರ್ ಖಾತೆಯಲ್ಲಿ  ಮಾಹಿತಿ ನೀಡಿದ್ದು,  ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಪರೀಕ್ಷೆಗೆ ಒಳಗಾದೆ. ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸದ್ಯ ನನ್ನ ಆರೋಗ್ಯ ಉತ್ತಮವಾಗಿದ್ದು, ವೈದ್ಯರ ಸಲಹೆಯ ಮೇರೆಗೆ  ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ಅವರು ಹೇಳಿಕೊಂಡಿದ್ದು,  ಕಳೆದ ಕೆಲವು ದಿನಗಳಲ್ಲಿ ಅವರೊಂದಿಗೆ ಸಂಪರ್ಕಕ್ಕೆ ಬಂದವರು ತಮ್ಮನ್ನು ತಾವು ಪರೀಕ್ಷಿಸಿಕೊಳ್ಳುವಂತೆ ಅವರು ಕೋರಿದ್ದಾರೆ.

Leave a Reply

Your email address will not be published. Required fields are marked *

Recent Posts

YOU MUST READ

Pin It on Pinterest

Share This