ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಬ್ಬರ ಜೋರಾಗಿದ್ದು, ಸಿಕ್ಕ ಸಿಕ್ಕವರ ದೇಹಹೊಕ್ಕಿ ನರ್ತಿಸುತ್ತಿದೆ. ಸದ್ಯ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9 ಸಾವಿರದ ಗಡಿ ದಾಟಿದ್ದು, ಕೊರೊನಾ ವಾರಿಯರ್ಸ್ ಆಗಿ ಕರ್ತವ್ಯ ನಿರ್ವಹಣೆ ಮಾಡುತ್ತಿರುವ ರಾಜ್ಯದ ಪೊಲೀಸರಿಗೂ ಕೊರೊನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಒಟ್ಟು 165 ಮಂದಿ ಪೊಲೀಸರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಈ 165 ಕೊರೊನಾ ಸೋಂಕಿತ ಪೊಲೀಸರ ಪೈಕಿ 63 ಮಂದಿ ಬೆಂಗಳೂರಿನವರಾಗಿದ್ದಾರೆ. ಒಟ್ಟು ಇಲ್ಲಿಯವರೆಗೆ 59 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಜೊತೆಗೆ ಮೂವರು ಸಾವನ್ನಪ್ಪಿದ್ದಾರೆ.
ಹೀಗಾಗಿ ಹಿರಿಯಾಧಿಕಾರಿಗಳ ಸೂಚನೆ ಮೇರೆಗೆ ಸದ್ಯ ಪೊಲೀಸ್ ಠಾಣೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸರು ವಿನಾಕಾರಣ ಸಾರ್ವಜನಿಕರನ್ನು ಭೇಟಿಯಾಗುವುದು ಅಥವಾ ಠಾಣೆಗಳಲ್ಲಿ ತನಿಖೆ ನೆಪದಲ್ಲಿ ಟೈಮ್ ಪಾಸ್ ಮಾಡುವುದನ್ನು ನಿಷೇಧ ಮಾಡಲಾಗಿದೆ.