ರಾಜ್ಯದಲ್ಲಿ ಮಂಗಳವಾರ 1135 ಜನರಿಗೆ ಕೊರೊನಾ ದೃಢ
ಬೆಂಗಳೂರು : ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ವೈರಸ್ ನ ಆರ್ಭಟ ಜೋರಾಗಿದ್ದು, ಮಂಗಳವಾರ ಒಂದೇ ದಿನ 1135 ಜನರಿಗೆ ಸೋಂಕು ತಗುಲಿರುವುದು ಧೃಡಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,62,339 ಕ್ಕೆ ಏರಿಕೆಯಾಗಿದೆ.
ಇದಲ್ಲದೇ ಮಂಗಳವಾರ ಕಿಲ್ಲರ್ ಕೊರೊನಾಗೆ ಆರು ಮಂದಿ ಕೊನೆಯುಸಿರೆಳೆದಿದ್ದು, ಈ ವರೆಗೂ 12,403 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ನಿನ್ನೆ 561 ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,40,489 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಸದ್ಯ ರಾಜ್ಯದಲ್ಲಿ 9428 ಸಕ್ರಿಯ ಪ್ರಕರಣಗಳು ಇದ್ದು, 129 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು ಬರೋಬ್ಬರಿ 710 ಜನರಿಗೆ ಸೋಂಕು ತಗುಲಿದೆ. ರಾಜಧಾನಿಯಲ್ಲಿ 6832 ಸಕ್ರಿಯ ಪ್ರಕರಣಗಳು ಇವೆ.