ಮೈಸೂರು : ಮಾಜಿ ಸಚಿವ ಹಾಗೂ ಶಾಸಕ ಜಿ.ಟಿ. ದೇವೇಗೌಡರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಅವರು ಹೋಂ ಐಸೋಲೇಷನ್ ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಜಿಟಿಡಿ, “ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಜೊತೆಗೆ ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್ ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ” ಎಂದು ತಿಳಿಸಿದ್ದಾರೆ.








