ಜೆಡಿಎಸ್ ಶಾಸಕ ಡಿ.ಸಿ ಗೌರಿ ಶಂಕರ್ ಅವರಿಗೆ ಕೊರೊನಾ ದೃಢ

ತುಮಕೂರು : ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಡಿ.ಸಿ ಗೌರಿಶಂಕರ್ ಅವರಿಗೆ ಕೊರೊನಾ ಸೋಂಕಿರುವುದು ದೃಢವಾಗಿದೆ. ಸದ್ಯ ಅವರು ವೈದ್ಯರ ಸಲಹೆ ಪಡೆದುಕೊಂಡು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಗೌರಿ ಶಂಕರ್ ಅವರೇ ಟ್ವಿಟ್ಟರ್ ನಲ್ಲಿ ಸ್ಪಷ್ಟಪಡಿಸಿದ್ದಾರೆ. “ನೆನ್ನೆ ಜ್ವರ ಇದ್ದ ಹಿನ್ನೆಲೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್-19 ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್ ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

 

Leave a Reply

Your email address will not be published. Required fields are marked *

Recent Posts

YOU MUST READ

Pin It on Pinterest

Share This