ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಕೊರೊನಾ ದೃಢ
ಬೆಂಗಳೂರು : ಇತ್ತಿಚೆಗಷ್ಟೆ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು.
ಇದಾದ ಎರಡು ದಿನದ ಅವಧಿಯಲ್ಲಿ ಅವರ ಪುತ್ರ, ಶಾಸಕ ಪ್ರಿಯಾಂಕ್ ಖರ್ಗೆ ಗೆ ಕೋವಿಡ್ ವಕ್ಕರಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಮೊದಲ ಮತ್ತು ಎರಡನೇ ಕೋವಿಡ್ ಅಲೆಯಲ್ಲಿ ಸೋಂಕಿನಿಂದ ಪಾರಾಗಿದ್ದೆ.
ಒಮ್ಮೆ ಕೊರೊನಾ ಪಾಸಿಟಿವ್ ಎಂದು ತಪ್ಪಾಗಿ ವರದಿ ಬಂದಿತ್ತು. ಹಲವು ಪರೀಕ್ಷೆಗಳಲ್ಲಿ ನೆಗೆಟಿವ್ ಬಂದಿತ್ತು.
ಆದರೆ ಈ ಬಾರಿ ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈಚೆಗೆ ನನ್ನ ಸಂಪರ್ಕಕ್ಕೆ ಬಂದಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.