ಕಾಳಗಿಯ ಸರ್ಕಾರಿ ಪ್ರೌಢಶಾಲೆಯ 15 ವಿದ್ಯಾರ್ಥಿಗಳಿಗೆ ಕೊರೊನಾ ದೃಢ

1 min read
Corona

ಕಾಳಗಿಯ ಸರ್ಕಾರಿ ಪ್ರೌಢಶಾಲೆಯ 15 ವಿದ್ಯಾರ್ಥಿಗಳಿಗೆ ಕೊರೊನಾ ದೃಢ Corona

ಕಲಬುರಗಿ : ಜಿಲ್ಲೆಯಾದ್ಯಂತ ಕೊರೊನಾ ವೈರಸ್ ಆರ್ಭಟ ಮುಂದುವರಿದಿದ್ದು, ಕಾಳಗಿ ಸರ್ಕಾರಿ ಪ್ರೌಢಶಾಲೆಯ 15 ಮಂದಿ ವಿದ್ಯಾರ್ಥಿಗಳಿಗೆ ಸೋಂಕಿರುವುದು ದೃಢಪಟ್ಟಿದೆ.

ಸೋಂಕಿತ ಮಕ್ಕಳು ಕಾಳಗಿ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮದ ನಿವಾಸಿಗಳಾಗಿದ್ದಾರೆ.

ಇವರಿಗೆ ಸೋಂಕಿನ ಲಕ್ಷಣಗಳು ಕಂಡುಬಂದಿರದ ಕಾರಣ ಮನೆಯಲ್ಲಿ ಐಸೋಲೇಷನ್ ಮಾಡಲಾಗಿದೆ.

Corona

ಈ ಶಾಲೆಯಲ್ಲಿ ಮಾರ್ಚ್ 1 ರಂದು 22 ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು.

ಇದೀಗ ಅದರ ಫಲಿತಾಂಶ ಬಂದಿದ್ದು, 15 ಮಕ್ಕಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಸೋಮವಾರದವರಗೆ ಶಾಲೆಗೆ ರಜೆ ಘೋಷಣೆ ಮಾಡಿ ಕಾಳಗಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

ಇನ್ನು ಶಾಲೆಯ 41 ವಿದ್ಯಾರ್ಥಿಗಳ ಟೆಸ್ಟ್ ರಿಪೋರ್ಟ್ ಬಾಕಿ ಉಳಿದಿದ್ದು, ಆತಂಕ ಹೆಚ್ಚಿಸಿದೆ.

Motera stadium
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd