ರಾಜ್ಯದಲ್ಲಿಂದು 973 ಜನರಿಗೆ ಕೊರೊನಾ ದೃಢ Corona saaksha tv
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಆರ್ಭಟ ಕಡಿಮೆಯಾಗಿದ್ದು, ಇವತ್ತು ರಾಜ್ಯದಾದ್ಯಂತ 973 ಕೊರೊನಾ ಕೇಸ್ ಗಳು ಪತ್ತೆಯಾಗಿವೆ.
ಇದೇ ಅವಧಿಯಲ್ಲಿ 17 ಮಂದಿ ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಇನ್ನು ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ 1071 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿನ್ನೂ 17,386 ಸಕ್ರಿಯ ಪ್ರಕರಣಗಳು ಇವೆ.
ಇತ್ತ ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಇವತ್ತು 243 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 8 ಜನರು ಕೊನೆಯುಸಿರೆಳೆದಿದ್ದಾರೆ.
260 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ನಗರದಲ್ಲಿನ್ನೂ 7180 ಸಕ್ರಿಯ ಪ್ರಕರಣಗಳಿವೆ.