ಮಂಡ್ಯ: ಸಕ್ಕರೆ ನಾಡು ಮಂಡ್ಯದ ಪೊಲೀಸರನ್ನು ಕೊರೊನಾ ಹೆಮ್ಮಾರಿ ಬೆಂಬಿಡದೆ ಕಾಡುತ್ತಿದೆ. ಮಂಡ್ಯದ ಸೈಬರ್ ಕ್ರೈಂ ವಿಭಾಗದ ಸಿಪಿಐಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿಯ ಪತಿಯಾಗಿರುವ ಸಿಪಿಐಗೆ ಕೊರೊನಾ ದೃಢಪಟ್ಟಿದ್ದರೆ, ಅವರ ಪತ್ನಿಗೆ(ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ) ನೆಗೆಟಿವ್ ಬಂದಿದೆ.
ಸೈಬರ್ ಕ್ರೈಂ ಠಾಣೆಯ ಸಿಪಿಐಗೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮಂಡ್ಯದ ಸೈಬರ್ ಕ್ರೈಂ ಹಾಗೂ ಮಹಿಳಾ ಠಾಣೆಗಳನ್ನು ಸೀಲ್‍ಡೌನ್ ಮಾಡಲಾಗಿದೆ. ಜತೆಗೆ 2 ಠಾಣೆಗಳ ಎಲ್ಲಾ ಸಿಬ್ಬಂದಿಗೂ ಕೊವಿಡ್ ಟೆಸ್ಟ್ ಮಾಡಿಸಲಾಗಿದೆ.
ಪುರಸಭೆ, ಪಟ್ಟಣ ಪಂಚಾಯಿತಿ ಸೀಲ್‍ಡೌನ್
ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಪುರಸಭೆ, ನಾಗಮಂಗಲ ತಾಲೂಕಿನ ಬೆಳ್ಳೂರಿನ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ.
ನಾಗಮಂಗಲ ಪುರಸಭೆಯ 7 ಮಂದಿಗೆ, ಬೆಳ್ಳೂರು ಪಟ್ಟಣ ಪಂಚಾಯಿತಿಯ ಆರೋಗ್ಯ ನಿರೀಕ್ಷಕಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಎರಡೂ ಕಚೇರಿಗಳನ್ನು ಸೀಲ್‍ಡೌನ್ ಮಾಡಲಾಗಿದೆ.