ರಾಜ್ಯದಲ್ಲಿ ಇಂದು 983 ಜನರಿಗೆ ಕೊರೊನಾ ಪಾಸಿಟಿವ್ Corona saaksha tv
ಬೆಂಗಳೂರು : ರಾಜ್ಯದಲ್ಲಿ ಇಂದು 983 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದ್ದು, ಇವತ್ತು 21 ಮಂದಿ ಸೋಂಕಿತರು ಕೊನೆಯುಸಿರೆಳೆದಿದ್ದಾರೆ.
ಇದಲ್ಲದೆ ಇಂದು 1620 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇನ್ನೂ 17,746 ಸಕ್ರಿಯ ಪ್ರಕರಣಗಳು ಇವೆ.
ಇನ್ನ ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಇವತ್ತು 289 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 618 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
7 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ನಗರದಲ್ಲಿನ್ನೂ 7382 ಸಕ್ರಿಯ ಪ್ರಕರಣಗಳು ಇದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.