ಹಾಸನ : ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗೆ ಕೊರೊನಾ ವೈರಸ್ ಸೋಂಕಿರುವುದು ದೃಢವಾಗಿದ್ದು, ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಹಾಸನದ ಅರಕಲಗೂಡಿನ ಪಟ್ಟಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ 16 ವರ್ಷದ ವಿದ್ಯಾರ್ಥಿಗೆ ಸೋಂಕು ದೃಢವಾಡವಾಗಿದೆ. ಈ ವಿದ್ಯಾರ್ಥಿ ಗುರುವಾರ ಪರೀಕ್ಷೆಗೆ ಹಾಜರಾಗಿ ಗಣಿತ ವಿಷಯ ಬರೆದಿದ್ದರು ಎಂದು ತಿಳಿದು ಬಂದಿದೆ. ಕೊರೊನಾ ಪರೀಕ್ಷೆ ವರದಿ ಹೊರಬಂದ ಕೂಡಲೇ ಆ ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಮಾಹಿತಿ ನೀಡಲಾಗಿದೆ. ಪರೀಕ್ಷೆಯನ್ನು ಪೂರ್ಣಗೊಳಿಸಿದ ಬಳಿಕ ಆ ವಿದ್ಯಾರ್ಥಿಯನ್ನು ಪ್ರತ್ಯೇಕ ತರಗತಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಪರೀಕ್ಷೆ ಆರಂಭಕ್ಕೂ ಮುನ್ನ ಈ ವಿದ್ಯಾರ್ಥಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದು, ಗಂಟಲು ದ್ರವ ಸಂಗ್ರಹಿಸಲಾಗಿತ್ತು. ವರದಿ ಬಂದ ಬಳಿಕ ವಿದ್ಯಾರ್ಥಿಗೆ ಸೋಂಕಿರುವು ದೃಢವಾಗಿದೆ.