ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ಮೂರುಸಾವಿರ ಮಠದ ಪಕ್ಕದಲ್ಲಿಯೇ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಮಠದ ಆವರಣವನ್ನು ಸೀಲ್ ಡೌನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಠದ ಭಕ್ತರಿಗೆ ಪ್ರವೇಶಕ್ಕೆ ನಿರ್ಬಂಧ ಏರಲಾಗಿದೆ.
ಸಾಮಾನ್ಯವಾಗಿ ಪ್ರತಿದಿನವೂ ನೂರಾರು ಭಕ್ತರು ಗದ್ದುಗೆ ದರ್ಶನಕ್ಕೆ ಆಗಮಿಸುತ್ತಿದ್ದರು. ಆದರೆ ಮಠದ ಪಕ್ಕದಲ್ಲೇ ವ್ಯಕ್ತಿ ಒಬ್ಬರಿಗೆ ಹೆಮ್ಮಾರಿ ಕೊರೊನಾ ಸೋಂಕಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮಠದ ಭಕ್ತರಿಗೆ ದರ್ಶನ ಭಾಗ್ಯ ಇಲ್ಲವಾಗಿದೆ.
ಮೂರು ಸಾವಿರ ಮಠದ ಪಕ್ಕದಲ್ಲೆ ರೋಗಿ- 9418 ಸೊಂಕಿತನಿಂದ ಮಠದ ಸುತ್ತಲಿನ 100 ಮೀಟರ್ ಪ್ರದೇಶ ಸೀಲ್ ಡೌನ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಅಲ್ಲದೇ ಮಠದ ಆವರಣದಲ್ಲಿ ಪೊಲೀಸ್ ಭದ್ರತೆ ನಿಯೋಜನೆ ಮಾಡಿದ್ದು, ಸಾರ್ವಜನಿಕರು ಅನಾವಶ್ಯಕ ಓಡಾಡದಂತೆ ಸೂಚನೆ ನೀಡಲಾಗಿದೆ.