ರಾಜ್ಯದಲ್ಲಿ ಲಾಕ್ ಡೌನ್ ಪಕ್ಕಾ : ಕಂಪ್ಲೀಟ್ ಲಾಕ್ ಡೌನ್ ಹೇಗಿರುತ್ತೆ ಗೊತ್ತಾ..?
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಜಾರಿಗೆ ತಂದ ಜನತಾ ಕಫ್ರ್ಯೂ ವಿಫಲವಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಂಪ್ಲೀಟ್ ಲಾಕ್ ಡೌನ್ ಮಾಡುವುದು ಬಹುತೇಕ ಖಚಿತವಾಗಿದೆ. ಈ ನಿಟ್ಟಿನಲ್ಲಿ ಇಂದು ಸಚಿವರು, ಅಧಿಕಾರಿಗಳ ಜೊತೆ ಸಿಎಂ ಮಹತ್ವದ ಸಭೆ ನಡೆಸಲಿದ್ದಾರೆ.
ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಚೈನ್ ಲಿಂಕ್ ಕಟ್ ಮಾಡಲು ಸರ್ಕಾರ, ಮೇ 12 ರಿಂದ 10 ದಿನ ಕಂಪ್ಲೀಟ್ ಲಾಕ್ ಡೌನ್ ಮಾಡಲು ಸಾಧ್ಯತೆಗಳಿವೆ.
ಕಂಪ್ಲೀಟ್ ಲಾಕ್ ಡೌನ್ ಹೇಗಿರುತ್ತೆ ಗೊತ್ತಾ..?
ಇನ್ನು ರಾಜ್ಯ ಸರ್ಕಾರ ಕಂಪ್ಲೀಟ್ ಲಾಕ್ ಡೌನ್ ಮಾಡಿದ್ರೆ, ಅವಶ್ಯಕ, ತುರ್ತು ಸೇವೆ, ಸಂಚಾರಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.
ಅಂದ್ರೆ ದಿನಸಿ, ಹಾಲು, ತರಕಾರಿ ಖರೀದಿಗೆ ಮಾತ್ರ ಸಮಯ ನಿಗದಿ ಮಾಡಿ ಅನುಮತಿ ನೀಡಲಾಗುತ್ತದೆ.
ಅಂತರ್ ಜಿಲ್ಲಾ, ಅಂತಾರಾಜ್ಯ ಸಂಚಾರ ಸಂಪೂರ್ಣ ಬಂದ್ ಆಗಲಿದೆ. ಕಳೆದ ವರ್ಷದ ಲಾಕ್ ಡೌನ್ ನಂತಯೇ ಈ ಲಾಕ್ ಡೌನ್ ಇರಲಿದೆ.
ಹೆದ್ದಾರಿಗಳಲ್ಲಿ ಬ್ಯಾರಿಕೇಡ್, ಪೆÇಲೀಸ್ ಕಾವಲು ಬಿಗಿಯಾಗಲಿದೆ. ಕೋವಿಡ್ ರೋಗಿಗಳ ಸಂಪರ್ಕಿತರಿಗೆ ಕಡ್ಡಾಯ ಹೋಂ ಕ್ವಾರಂಟೈನ್ ಗೆ ಕ್ರಮ ಕೈಗೊಳ್ಳಲಾಗುತ್ತದೆ.