ನವದೆಹಲಿ: ದೇಶದಾದ್ಯಂತ ಕೊರೊನಾ – ಲಾಕ್‌ಡೌನ್ ಅವಧಿಯಲ್ಲಿ ಮಕ್ಕಳ ಮೇಲಿನ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಅಧ್ಯಕ್ಷರಾದ ಪ್ರಿಯಾಂಕ ಕನೂಂಗೂ ಅವರು ತಿಳಿಸಿದ್ದಾರೆ.
ಕೊರೊನಾ ಲಾಕ್ ಡೌನ್ ಅವಧಿಯಲ್ಲಿ ಮಕ್ಕಳ ಮೇಲಿನ ಅಪರಾಧಗಳ ಕುರಿತು ದಾಖಲಾದ ದೂರುಗಳ ಸಮಖ್ಯೆಯಲ್ಲಿ ಇಳಿಕೆಯಾಗಿದೆ ಎಂದಿದ್ದಾರೆ ಪ್ರಿಯಾಂಕ ಕನೂಂಗೂ ಅವರು. ಇನ್ನೂ ಇದೇ ವಿಚಾರವಾಗಿ ಮುಂದುವರೆದು ಮಾತನಾಡಿರುವ ಅವರು ಮಕ್ಕಳು ಎದುರಿಸುತ್ತಿದ್ದ ಸಮಸ್ಯೆಗಳನ್ನು ಪರಿಹರಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಲವು ಕ್ರಮಗಳನ್ನು ಕೈಗೊಂಡಿತ್ತು. ಹೀಗಾಗಿ, ಲಾಕ್‌ಡೌನ್ ಅವಧಿಯಲ್ಲಿ ಯಾವುದೇ ಮಕ್ಕಳ ಮೇಲಿನ ಅಪರಾಧ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಲಿಲ್ಲ ಎಂದು ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.