ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಅಭಿವೃದ್ಧಿ ಪಡಿಸಿರುವ ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗ ಯಶಸ್ವಿಯಾಗಿದ್ದು, ಲೈಸೆನ್ಸ್ ಸಿಕ್ಕ ತಕ್ಷಣವೇ ಭಾರತದಲ್ಲಿಯೂ ಪ್ರಯೋಗ ಆರಂಭಿಸಲಾಗುವುದು ಎಂದು ಭಾರತೀಯ ಪಾಲುದಾರಿಕಾ ಸಂಸ್ಥೆ ಮಾಹಿತಿ ನೀಡಿದೆ. ಇದಲ್ಲದೇ ಬಾರತಕ್ಕೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿರುವ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯಸ್ಥ ಅದರ್ ಪೂನಾವಾಲಾ ಅವರು ಲಸಿಕೆಯನ್ನು ಭಾರತದಲ್ಲಿಯೇ ಉತ್ಪಾದಿಸಲು ಪರವಾನಗಿ ಪಡೆಯುವುದಾಗಿ ಸ್ಪಷ್ಟನೆ ನೀಡಿದ್ದಾರೆ. ಈಗಾಗಲೇ AZD1222 ಲಸಿಕೆಯ ಪರವಾನಗಿಗಾಗಿ ಮನವಿ ಸಲ್ಲಿಸಲಾಗಿದ್ದು, ಲೈಸೆನ್ಸ್ ಸಿಕ್ಕ ತಕ್ಷಣವೇ ಭಾರತದಲ್ಲಿ ಮಾನವಕ್ಲಿನಿಕಲ್ ಪ್ರಯೋಗಕ್ಕೆ ತಯಾರಿ ನಡೆಸಲಾಗುವುದು ಎಂದು ಪೂನಾವಾಲಾ ತಿಳಿಸಿದ್ದಾರೆ. ಅಲ್ಲದೇ ಮಾನವ ಮೇಲೆ ಈ ಲಸಿಕೆ ಪ್ರಯೋಗಕ್ಕೆ ಶೀಘ್ರವೇ ಲೈಸೆನ್ಸ್ ಸಿಗುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.
ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?
ಮುಂಬೈ: ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಒಂದು ಕಡೆ ಸಂತಸದ ಸುದ್ದಿ ಸಿಕ್ಕಿದ್ದರೆ, ಮತ್ತೊಂದು ಕಡೆ ಆಯ್ಕೆ ಸಮಿತಿಯ ಒಳಗಿನ ಅಸಲಿ ಆಟ ಈಗ ಬಯಲಾಗಿದೆ. ಮುಂಬರುವ ನ್ಯೂಜಿಲೆಂಡ್...








