ದೇಶದಲ್ಲಿ ಕೊರೊನಾ ಭೀತಿ ಹೆಚ್ಚಾಗುತ್ತಿದೆ. ಹಾಗಾಗಿ ಎಲ್ಲಾ ರಾಜ್ಯ ಸರ್ಕಾರಗಳು ಅಗತ್ಯ ಕ್ರಮಗಳನ್ನು ಕೈಗೊಂಡಿವೆ. ಆದರೂ ಕೊರೊನಾ ಮಹಾಮಾರಿ ಆರ್ಭಟಕ್ಕೆ ಬ್ರೇಕ್ ಹಾಕಲು ಆಗಿಲ್ಲ. ಅದ್ದರಿಂದ ದೇಶದಲ್ಲಿ ಮಾರ್ಚ್ 22 ರಂದು ಜನತಾ ಕರ್ಫ್ಯೂ ಜಾರಿಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದರು. ಜೊತೆಗೆ ಇಂದು ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಸಂವಾದ ನಡೆಸಲಿದ್ದಾರೆ.
ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಡಿಯೋ ಸಂವಾದ ನಡೆಸುತ್ತಾರೆ. ಈ ವಿಡಿಯೋ ಸಂವಾದದಲ್ಲಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಭಾಗವಹಿಸುತ್ತಾರೆ. ಸಂವಾದದ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಎಷ್ಟು ಪ್ರಕರಣಗಳು ಪತ್ತೆಯಾಗಿವೆ. ಇನ್ನೂ ಯಾವ ಯಾವ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬ ವಿಚಾರದ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ








